ಮಿನ್ಸ್ಕ್ : ಬೆಲರೂಸಿಯನ್ ರಾಜಧಾನಿ ಮಿನ್ಸ್ಕ್ ನಲ್ಲಿ (Minsk) ಭದ್ರತಾ ಪಡೆಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮುಖಸ್ಥ ಇವಾನ್ ಕುಬ್ರಕೋವ್ ತಿಳಿಸಿದ್ದಾರೆ.
ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲೆಸೆದರು, ವಾಹನಗಳ ಮೇಲೂ ದಾಳಿ ನಡೆಸಿದರು. ಈ ವೇಳೆ ಪೊಲೀಸರು ಪರಿಸ್ಥಿಯನ್ನು ಹತೋಟಿಗೆ ತಂದರು. ಪೊಲೀಸರ ಕಾರ್ಯಕ್ಕೆ ಧನ್ಯವಾದಗಳು, ಮಿನ್ಸ್ಕ್ ನಗರವನ್ನು ತಮ್ಮ ಹತೋಟಿಗೆ ತೆಗೆದುಕೊಳ್ಳುವ ಪ್ರಯತ್ನದಲ್ಲಿ ಪ್ರತಿಭಟನಾಕಾರರು ವಿಫಲರಾಗಿದ್ದರೆ ಎಂದು ಕುಬ್ರಕೋವ್ ಮಾಹಿತಿ ನೀಡಿದ್ದಾರೆ.
ಪೊಲೀಸರ ಮೇಲೆ ದಾಳಿ ಮಾಡಿದವರು ಮತ್ತು ನಗರದ ಇತರ ಭಾಗದಲ್ಲಿ ಅಶಾಂತಿ ಸೃಷ್ಟಿಸಿದ 120 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ.