ETV Bharat / international

ಉಕ್ರೇನ್ ವಿಚಾರದಲ್ಲಿ ಭಾರತದ ತಟಸ್ಥ ನಿಲುವು ಸ್ವಾಗತಾರ್ಹ: ರಷ್ಯಾ - ಭಾರತದ ಬಗ್ಗೆ ರಷ್ಯಾ ಹೇಳಿಕೆ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಚಟುವಟಿಕೆಗಳು ಉಭಯ ರಾಷ್ಟ್ರಗಳ ಪಾಲುದಾರಿಕೆಯನ್ನು ಸಂಪೂರ್ಣವಾಗಿ ಬಿಂಬಿಸುತ್ತವೆ ಎಂದು ರಷ್ಯಾ ಹೇಳಿದೆ.

Russia on india stand on ukraine issue
ಉಕ್ರೇನ್ ವಿಚಾರದಲ್ಲಿ ಭಾರತ ನಿಲುವು ಸ್ವಾಗತಾರ್ಹ: ರಷ್ಯಾ
author img

By

Published : Feb 24, 2022, 1:27 PM IST

Updated : Feb 24, 2022, 1:32 PM IST

ಮಾಸ್ಕೋ(ರಷ್ಯಾ): ಉಕ್ರೇನ್ ಬಿಕ್ಕಟ್ಟಿನ ವಿಚಾರದ ಕುರಿತಂತೆ ಭಾರತದ ಸ್ವತಂತ್ರ(ತಟಸ್ಥ) ನಿಲುವನ್ನು ನಾವು ಸ್ವಾಗತಿಸುತ್ತೇವೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಉಭಯ ದೇಶಗಳ ನಡುವಿನ ವಿಶೇಷವಾದ ಪಾಲುದಾರಿಕೆಯನ್ನು ಭಾರತದ ಈ ನಡೆ ಪ್ರತಿಬಿಂಬಿಸುತ್ತದೆ ಎಂದು ರಷ್ಯಾ ಶ್ಲಾಫಿಸಿದೆ.

ಭಾರತವು ಜವಾಬ್ದಾರಿಯುತ ಜಾಗತಿಕ ಶಕ್ತಿಯಾಗಿ ಪ್ರಮುಖ ಪಾತ್ರ ವಹಿಸುತ್ತಿದೆ. ಜಾಗತಿಕ ವ್ಯವಹಾರಗಳಿಗೆ ಸ್ವತಂತ್ರ ಮತ್ತು ಸಮತೋಲಿತ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ರಷ್ಯಾ ಮಿಷನ್​ನ ಉಪ ಮುಖ್ಯಸ್ಥ ರೋಮನ್​ ಬಾಬುಶ್ಕಿನ್ ಹೇಳಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಈ ಹಿಂದೆ ಭಾರತವು ತೆಗೆದುಕೊಂಡ ಸ್ವತಂತ್ರ ನಿರ್ಧಾರಗಳನ್ನು ನಾವು ಸ್ವಾಗತಿಸುತ್ತೇವೆ ಎಂದು ರೋಮನ್​ ಬಾಬುಶ್ಕಿನ್ ಆನ್‌ಲೈನ್ ಮಾಧ್ಯಮ ಸಂವಾದವೊಂದರಲ್ಲಿ ಹೇಳಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಚಟುವಟಿಕೆಗಳು ಉಭಯ ರಾಷ್ಟ್ರಗಳ ಪಾಲುದಾರಿಕೆಯನ್ನು ಸಂಪೂರ್ಣವಾಗಿ ಬಿಂಬಿಸುತ್ತವೆ ಎಂಬುದು ಅವರ ಅಭಿಪ್ರಾಯ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್​ನ ಎರಡು ಪ್ರದೇಶಗಳನ್ನು ಸ್ವತಂತ್ರ ದೇಶಗಳನ್ನಾಗಿ ಘೋಷಿಸಿದ ನಂತರ ಉದ್ವಿಗ್ನತೆ ಹೆಚ್ಚಾಗಿತ್ತು. ಈ ಮಧ್ಯೆ ವಿಶ್ವಸಂಸ್ಥೆಯ ತುರ್ತುಸಭೆಯಲ್ಲಿ ಭಾಗವಹಿಸಿದ್ದ ಭಾರತ ಉಕ್ರೇನ್ ಮತ್ತು ರಷ್ಯಾ ಶಾಂತಿ ಕಾಪಾಡಬೇಕೆಂದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬಾಬುಶ್ಕಿನ್ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಮತ್ತು ರಷ್ಯಾ ನಡುವಿನ ಪಾಲುದಾರಿಕೆ ಯಾರಿಗೂ ಯಾವುದೇ ಬೆದರಿಕೆಯನ್ನು ಪ್ರತಿನಿಧಿಸುವುದಿಲ್ಲ. ಭಾರತ-ರಷ್ಯಾ ಸಂಬಂಧ ಯಥಾಸ್ಥಿತಿಯಲ್ಲೇ ಮುಂದುವರೆಯಲಿದೆ ಎಂದು ರೋಮನ್​ ಬಾಬುಶ್ಕಿನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಷ್ಯಾ ವಿರುದ್ಧ ಪ್ರತಿದಾಳಿ: 'ಐದು ವಿಮಾನ, ಒಂದು ಹೆಲಿಕಾಪ್ಟರ್ ಹೊಡೆದುರುಳಿಸಿದ ಉಕ್ರೇನ್'

Last Updated : Feb 24, 2022, 1:32 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.