ನವದೆಹಲಿ: ಉಕ್ರೇನ್ನಲ್ಲಿರುವ ಭಾರತೀಯರನ್ನು ಕರೆತರುವ ಸಲುವಾಗಿ ಕೇಂದ್ರ ಸರ್ಕಾರ 'ಆಪರೇಷನ್ ಗಂಗಾ' ಮಿಷನ್ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಉಕ್ರೇನ್ ನಗರಗಳಿಂದ ಸಮೀಪದ ಬೇರೆ ರಾಷ್ಟ್ರಗಳಿಗೆ ವಾಹನಗಳ ಮೂಲಕ ಭಾರತೀಯರನ್ನು ಸಾಗಿಸಿ, ಅಲ್ಲಿಂದ ಭಾರತಕ್ಕೆ ಏರ್ಲಿಫ್ಟ್ ಮಾಡಲಾಗುತ್ತಿದೆ. ಈ ವೇಳೆ ವಾಹನಗಳಲ್ಲಿ ಭಾರತೀಯ ಧ್ವಜವನ್ನು ಪ್ರದರ್ಶಿಸಲಾಗುತ್ತಿದೆ. ಈಗ ಭಾರತೀಯ ಧ್ವಜ ಬೇರೆ ದೇಶಗಳ ವಿದ್ಯಾರ್ಥಿಗಳನ್ನೂ ರಕ್ಷಿಸಿದೆ ಅನ್ನೋದು ವಿಶೇಷವಾಗಿದೆ.
ಹೌದು, ಭಾರತೀಯ ಧ್ವಜ ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ರಕ್ಷಿಸಿದ್ದು ಮಾತ್ರವಲ್ಲದೆ, ಉಕ್ರೇನ್‌ನಿಂದ ತಮ್ಮ ದೇಶಕ್ಕೆ ತೆರಳಲು ಪಾಕಿಸ್ತಾನಿ ಮತ್ತು ಟರ್ಕಿಶ್ ವಿದ್ಯಾರ್ಥಿಗಳಿಗೂ ಸಹಾಯ ಮಾಡಿದೆ ಎಂದು ಭಾರತೀಯ ವಿದ್ಯಾರ್ಥಿಯೊಬ್ಬರು ಎಎನ್ಐಗೆ ಮಾಹಿತಿ ನೀಡಿದ್ದಾರೆ.
-
#WATCH | "We were easily given clearance due to the Indian flag; made the flag using a curtain & colour spray...Both Indian flag & Indians were of great help to the Pakistani, Turkish students," said Indians students after their arrival in Bucharest, Romania#UkraineCrisis pic.twitter.com/vag59CcPVf
— ANI (@ANI) March 2, 2022 " class="align-text-top noRightClick twitterSection" data="
">#WATCH | "We were easily given clearance due to the Indian flag; made the flag using a curtain & colour spray...Both Indian flag & Indians were of great help to the Pakistani, Turkish students," said Indians students after their arrival in Bucharest, Romania#UkraineCrisis pic.twitter.com/vag59CcPVf
— ANI (@ANI) March 2, 2022#WATCH | "We were easily given clearance due to the Indian flag; made the flag using a curtain & colour spray...Both Indian flag & Indians were of great help to the Pakistani, Turkish students," said Indians students after their arrival in Bucharest, Romania#UkraineCrisis pic.twitter.com/vag59CcPVf
— ANI (@ANI) March 2, 2022
ಉಕ್ರೇನ್‌ನಿಂದ ರೊಮೇನಿಯಾದ ಬುಕಾರೆಸ್ಟ್ ನಗರಕ್ಕೆ ಆಗಮಿಸಿದ ಭಾರತೀಯ ವಿದ್ಯಾರ್ಥಿಗಳು ಭಾರತೀಯ ಧ್ವಜವು ಕೆಲವು ಪಾಕಿಸ್ತಾನಿ ಮತ್ತು ಟರ್ಕಿಶ್ ವಿದ್ಯಾರ್ಥಿಗಳು ಉಕ್ರೇನ್ನ ವಿವಿಧ ಚೆಕ್‌ಪೋಸ್ಟ್‌ಗಳನ್ನು ಸುರಕ್ಷಿತವಾಗಿ ದಾಟಲು ಸಹಾಯ ಮಾಡಿತು. ಭಾರತದ ತ್ರಿವರ್ಣ ಧ್ವಜವನ್ನು ಟರ್ಕಿಶ್ ಮತ್ತು ಪಾಕಿಸ್ತಾನಿ ವಿದ್ಯಾರ್ಥಿಗಳು ಸಹ ಬಳಸುತ್ತಿದ್ದಾರೆ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.
ಇದನ್ನೂ ಓದಿ: ಉಕ್ರೇನ್-ರಷ್ಯಾ ಯುದ್ಧ: ಕ್ರಿಮಿಯಾ ಸಮೀಪದ ಖೆರ್ಸನ್ ನಗರ ವಶಕ್ಕೆ ಪಡೆದ ರಷ್ಯಾ ಸೇನೆ
ಕೆಲವು ದಿನಗಳ ಹಿಂದಷ್ಟೇ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಅವರು ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗೆ ತಮ್ಮ ವಾಹನಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವಂತೆ ಶಿಫಾರಸು ಮಾಡಿದ್ದರು.
ಧ್ವಜವನ್ನು ಅವರೇ ತಯಾರಿಸಿದ್ದರು!: ಭಾರತೀಯ ಧ್ವಜವನ್ನು ನಾವೇ ತಯಾರಿಸಿದ್ದೆವು. ಅಂಗಡಿಗೆ ತೆರಳಿ, ಕೆಲವು ಬಣ್ಣದ ಸ್ಪ್ರೇಗಳನ್ನು ಮತ್ತು ಬಟ್ಟೆಯನ್ನು ತಂದು, ಬಟ್ಟೆಯನ್ನು ಕತ್ತರಿಸಿ, ಅಳತೆಗೆ ಅನುಗುಣವಾಗಿ ಸ್ಪ್ರೇ ಸಿಂಪಡಿಸಿ, ತ್ರಿವರ್ಣ ಧ್ವಜವನ್ನು ತಯಾರಿಸಿದ್ದೇನೆ ಎಂದು ವಿದ್ಯಾರ್ಥಿಯಯೊಬ್ಬರು ವಿವರಿಸಿದ್ದಾರೆ.