ಕೀವ್(ಉಕ್ರೇನ್): ರಷ್ಯಾದ ಪಡೆಗಳು ಉಕ್ರೇನ್‌ನಲ್ಲಿ TOS-1A ಎಂಬ ಥರ್ಮೋಬ್ಯಾರಿಕ್ ರಾಕೆಟ್‌ಗಳನ್ನು ಅಥವಾ ವ್ಯಾಕ್ಯೂಮ್ ಬಾಂಬ್ಗಳನ್ನು ಬಳಸಿರುವುದನ್ನು ರಷ್ಯಾದ ರಕ್ಷಣಾ ಇಲಾಖೆ ದೃಢಪಡಿಸಿದೆ ಎಂದು ಬ್ರಿಟನ್ನ ರಕ್ಷಣಾ ಇಲಾಖೆ ಟ್ವಿಟರ್ನಲ್ಲಿ ಮಾಹಿತಿ ನೀಡಿದೆ.
ಈ ಹಿಂದೆ, ರಷ್ಯಾ ಥರ್ಮೋಬ್ಯಾರಿಕ್ ಶಸ್ತ್ರಾಸ್ತ್ರಗಳನ್ನು ಬಳಸುತ್ತಿದೆ ಎಂದು ಉಕ್ರೇನ್ ಆರೋಪಿಸಿತ್ತು. ಯುನೈಟೆಡ್ ಸ್ಟೇಟ್ಸ್‌ನಲ್ಲಿನ ಉಕ್ರೇನ್ ರಾಯಭಾರಿ ಒಕ್ಸಾನಾ ಮಾರ್ಕರೋವಾ ಅವರು ರಷ್ಯಾ ಥರ್ಮೋಬ್ಯಾರಿಕ್ ಶಸ್ತ್ರಾಸ್ತ್ರವನ್ನು ಬಳಸಿದೆ. ಅದರಿಂದಾಗುವ ವಿನಾಶ ದೊಡ್ಡದಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು.
ಇದನ್ನೂ ಓದಿ: ಉಕ್ರೇನ್ ಯುದ್ಧದಲ್ಲಿ ನಿಷೇಧಿತ ಅಸ್ತ್ರ ಬಳಸುತ್ತಿದೆಯೇ ರಷ್ಯಾ? ಥರ್ಮೋಬ್ಯಾರಿಕ್ ಶಸ್ತ್ರಾಸ್ತ್ರ ಎಂದರೇನು?
ಇದರ ಜೊತೆಗೆ ಉಕ್ರೇನ್‌ನ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್‌ನಲ್ಲಿರುವ ಪರಮಾಣು ಸಂಶೋಧನಾ ಕೇಂದ್ರದ ಮೇಲೆ ಬಾಂಬ್ ದಾಳಿ ನಡೆಸಿವೆ ಎಂದು ಉಕ್ರೇನ್ ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.
ಉಕ್ರೇನ್‌ನ ಸ್ಟೇಟ್ ನ್ಯೂಕ್ಲಿಯರ್ ರೆಗ್ಯುಲೇಟರಿ ಇನ್ಸ್‌ಪೆಕ್ಟರೇಟ್ ಫೇಸ್ಬುಕ್ ಪೋಸ್ಟ್ನಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದೆ. ಗುರುವಾರ ರಾತ್ರಿ ಖಾರ್ಕಿವ್ ಇನ್‌ಸ್ಟಿಟ್ಯೂಟ್ ಆಫ್ ಫಿಸಿಕ್ಸ್ ಅಂಡ್ ಟೆಕ್ನಾಲಜಿಯ ಮೇಲೆ ಬಾಂಬ್ ದಾಳಿ ನಡೆಸಲಾಗಿದ್ದು, ನ್ಯೂಟ್ರಾನ್ ನ್ಯೂಕ್ಲಿಯರ್ ರಿಸರ್ಚ್ ಸಬ್‌ಕ್ರಿಟಿಕಲ್ ಯುನಿಟ್‌ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ ಎನ್ನಲಾಗಿದೆ.