ರಕ್ಕಾ(ಸಿರಿಯಾ): ಟರ್ಕಿ-ಸಿರಿಯಾ ಗಡಿಭಾಗದ ತಾಲ್ ಅಬ್ಯಾಡ್ ಪ್ರದೇಶದಲ್ಲಿ ಕಾರು ಸ್ಫೋಟಗೊಂಡು 8 ಜನ ಸಾವನ್ನಪ್ಪಿದ್ದಾರೆ.
ಘಟನೆಯಿಂದ ಸುಮಾರು 20 ಅಮಾಯಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಟರ್ಕಿಯ ರಕ್ಷಣಾ ಸಚಿವಾಲಯ ತಿಳಿಸಿದೆ.
ಕುರ್ದಿಷ್ ಪೀಪಲ್ಸ್ ಪ್ರೊಟೆಕ್ಷನ್ ಯುನಿಟ್ಸ್ (ವೈಪಿಜಿ) ಭಯೋತ್ಪಾದಕರು ಮುಗ್ಧ ನಾಗರಿಕರನ್ನು ಹತ್ಯೆಗೈದಿದ್ದಾರೆ ಎನ್ನಲಾಗ್ತಿದೆ. ತಾಲ್ ಅಬ್ಯಾಡ್ನ ದಕ್ಷಿಣದಲ್ಲಿರುವ ಸಾಲಿಕ್ ಅತಿಕ್ ಗ್ರಾಮದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 8 ನಾಗರಿಕರು ಸಾವನ್ನಪ್ಪಿ, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಟರ್ಕಿಯ ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ.
ಟರ್ಕಿಯ ರಕ್ಷಣಾ ಸಚಿವಾಲಯ ಈ ಭಯೋತ್ಪಾದಕ ಕೃತ್ಯವನ್ನು ತೀವ್ರವಾಗಿ ಖಂಡಿಸಿದೆ.