ETV Bharat / international

ಇಂದು ಕೊರೊನಾ ವ್ಯಾಕ್ಸಿನ್​ ಪಡೆಯಲಿರುವ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ - ಯುಕೆ ಪ್ರಧಾನಿ ಬೋರಿಸ್ ಜಾನ್ಸನ್

ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಇಂದು ಕೊರೊನಾ ಲಸಿಕೆ ಪಡೆಯಲಿದ್ದಾರೆ. ಈ ಕುರಿತಂತೆ ನಿನ್ನೆ ಮಾಧ್ಯಮಗಳಿಗೆ ಅವರು ಮಾಹಿತಿ ನೀಡಿದ್ದರು.

ಬೋರಿಸ್ ಜಾನ್ಸನ್
UK PM Boris
author img

By

Published : Mar 19, 2021, 7:27 AM IST

ಲಂಡನ್: ಇಂಗ್ಲೆಂಡ್​ ಪ್ರಧಾನಿ ಬೋರಿಸ್ ಜಾನ್ಸನ್ ಇಂದು ಕೊರೊನಾ ಲಸಿಕೆ ಪಡೆಯಲಿದ್ದು, ಸ್ವತಃ ಅವರೇ ಮಾಹಿತಿ ನೀಡಿದ್ದಾರೆ.

ಯುಕೆಯಲ್ಲಿ ಸುಮಾರು 50 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, 56 ವರ್ಷದ ಜಾನ್ಸನ್ ಅವರು ಇಂದು ಲಸಿಕೆ ಪಡೆಯಲಿದ್ದಾರೆ. ಈ ಕುರಿತಂತೆ ನಿನ್ನೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು.

ಆಕ್ಸ್‌ಫರ್ಡ್ ಮತ್ತು ಫೈಜರ್​​ ಕಂಪನಿಗಳು ಕೊರೊನಾ ಲಸಿಕೆ ಕಂಡು ಹಿಡಿಯುವ ಮೂಲಕ ಉತ್ತಮ ಕೆಲಸ ಮಾಡಿವೆ. ಕೋವಿಡ್​ಗೆ ತುತ್ತಾಗುವ ಮುನ್ನಾ ನಮ್ಮ ನಮ್ಮ ಸರದಿ ಬಂದಾಗ ವ್ಯಾಕ್ಸಿನ್​ ಪಡೆಯುವುದು ಮುಖ್ಯವಾಗಿದೆ. ದೇಶದಲ್ಲಿ ಪ್ರಸ್ತುತ ಆಕ್ಸ್‌ಫರ್ಡ್ ಮತ್ತು ಅಸ್ಟ್ರಾಜೆನೆಕಾ ಲಸಿಕೆಯನ್ನು ನೀಡಲಾಗುತ್ತಿದೆ. ಅದರಲ್ಲಿ ನಾನು ಒಂದು ಲಸಿಕೆ ಹಾಕಿಸಿಕೊಳ್ಳಲಿದ್ದೇನೆ ಎಂದು ಡೌನಿಂಗ್ ಸ್ಟ್ರೀಟ್‌ನಲ್ಲಿ ಹೇಳಿದ್ದಾರೆ.

ಓದಿ: ಕೇರಳ ಚುನಾವಣೆ: ಅಭ್ಯರ್ಥಿ ಆಯ್ಕೆಯಲ್ಲಿ ನಡೆದಿತ್ತಾ 'ಮೌನ ಒಪ್ಪಂದ'!

ಇತ್ತೀಚೆಗೆ ಅಸ್ಟ್ರಾಜೆನೆಕಾ ಲಸಿಕೆ ಪಡೆದವರಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸೇರಿದಂತೆ ಕೆಲವು ಸಮಸ್ಯೆಗಳು ಕಂಡು ಬಂದಿದ್ದವು. ಆದಾಗ್ಯೂ ಯುರೋಪಿಯನ್ ಮೆಡಿಸಿನ್ಸ್ ಏಜೆನ್ಸಿ ಲಸಿಕೆ ಮತ್ತು ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಗೆ ಏನು ಕಾರಣ ಎಂಬುದನ್ನು ಕಂಡುಹಿಡಿಯುವಲ್ಲಿ ವಿಫಲವಾಗಿದೆ.

ಈಗಾಗಲೇ ಯುಕೆಯಲ್ಲಿ 25 ಮಿಲಿಯನ್‌ಗಿಂತಲೂ ಹೆಚ್ಚು ಜನರಿಗೆ ಲಸಿಕೆ ಮೊದಲ ಡೋಸ್‌ ನೀಡಲಾಗಿದ್ದು, ಎರಡನೇ ಹಂತದಲ್ಲಿ 1.7 ಮಿಲಿಯನ್‌ಗಿಂತಲೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗುತ್ತದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.