ಹೈದರಾಬಾದ್: ರಷ್ಯಾ ಮಿಲಿಟರಿ ಪಡೆಯಿಂದ ದಾಳಿಗೊಳಗಾಗಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೆಸರನ್ನ 2022ರ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ.
ಯುರೋಪಿಯನ್ ಹಲವು ಹಾಲಿ ಮತ್ತು ಮಾಜಿ ರಾಜಕಾರಣಿಗಳು ಇವರ ಹೆಸರು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡುವಂತೆ ನೊಬೆಲ್ ಕಮಿಟಿಗೆ ಮನವಿ ಮಾಡಿದ್ದಾರೆ. ಜೊತೆಗೆ ಉಕ್ರೇನ್ ಜನರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನಾಮನಿರ್ದೇಶನವನ್ನು ಅನುಮತಿಸಲು ಮಾರ್ಚ್ 31, 2022 ರವರೆಗೆ ವಿಸ್ತರಣೆ ಮಾಡುವಂತೆ ತಿಳಿಸಿದೆ. ಅಕ್ಟೋಬರ್ ತಿಂಗಳಲ್ಲಿ ಈ ವರ್ಷದ ನೊಬೆಲ್ ಪ್ರಶಸ್ತಿ ಘೋಷಣೆಯಾಗಲಿದ್ದು, ವಿಶ್ವದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾಗಿದೆ.2022ರ ನೊಬೆಲ್ ಪ್ರಶಸ್ತಿಗಾಗಿ 251 ವ್ಯಕ್ತಿಗಳು ಮತ್ತು 92 ಸಂಸ್ಥೆಗಳು ಅರ್ಜಿ ಸಲ್ಲಿಕೆ ಮಾಡಿವೆ.
ಇದನ್ನೂ ಓದಿ: ರಷ್ಯಾ ಮಿಲಿಟರಿ ದಾಳಿಗೆ ಉಕ್ರೇನ್ನ 816 ಜನರು ಬಲಿ: ವಿಶ್ವಸಂಸ್ಥೆ
ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಅನೇಕ ಅಮಾಯಕ ಜೀವಗಳು ಪ್ರಾಣ ಕಳೆದುಕೊಂಡಿದ್ದು, ಸಾವಿರಾರು ಯೋಧರು ಸಾವನ್ನಪ್ಪಿದ್ದಾರೆ. ಉಕ್ರೇನ್ನ ಪ್ರಮುಖ ನಗರಗಳು ಧ್ವಂಸಗೊಂಡಿವೆ.