ಕೀವ್ : ಉಕ್ರೇನ್ ನಗರಗಳ ಮೇಲೆ ರಷ್ಯಾ ದಾಳಿ ಮುಂದುವರಿದಿದೆ. ನಗರದ ವಸತಿ ಕಟ್ಟಡದ ಮೇಲೆ ರಷ್ಯಾ ಸೈನಿಕರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಖ್ಯಾತ ನಟಿಯೊಬ್ಬರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ನಗರದ ವಸತಿ ಕಟ್ಟಡದ ಮೇಲೆ ರಷ್ಯಾ ಸೈನಿಕರು ನಡೆಸಿದ ರಾಕೆಟ್ ಶೆಲ್ ದಾಳಿಯಲ್ಲಿ ಖ್ಯಾತ ನಟಿ ಒಕ್ಸಾನಾ ಶ್ವೆಟ್ಸ್ನ್ನು (67) ಕೊಂದಿದ್ದಾರೆ ಎಂದು ಯಂಗ್ ಥಿಯೇಟರ್ ತಂಡ ಹೇಳಿಕೆ ನೀಡಿದೆ. ಇನ್ನು ಒಕ್ಸಾನಾ ಶ್ವೆಟ್ಸ್ಗೆ ಸ್ಥಳೀಯ ಸರ್ಕಾರ ಉಕ್ರೇನ್‌ನ ಅತ್ಯುನ್ನತ ಕಲಾತ್ಮಕ ಗೌರವಗಳಲ್ಲಿ ಒಂದಾದ 'ಉಕ್ರೇನ್‌ನ ಗೌರವಾನ್ವಿತ ಕಲಾವಿದೆ' ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಓದಿ: ಇದೆಂಥಾ ಬಿಸಿಲು.. ತೆಲಂಗಾಣದಲ್ಲಿ 43.5 ಡಿಗ್ರಿ ಸೆಲ್ಸಿಯಸ್ ತಾಪಮಾನಕ್ಕೆ ಜನ ತತ್ತರ; ದೇಶದಲ್ಲೇ ಇದು ಗರಿಷ್ಠ!!
ಫೆಬ್ರವರಿ 24 ರಂದು ಉಕ್ರೇನ್‌ನಲ್ಲಿ ರಷ್ಯಾ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ವಿಶೇಷ ಕಾರ್ಯಾಚರಣೆಯು ಉಕ್ರೇನಿಯನ್ ಮಿಲಿಟರಿ ಮೂಲಸೌಕರ್ಯವನ್ನು ಮಾತ್ರ ಗುರಿಯಾಗಿಸಿಕೊಂಡಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ.
ಆದ್ರೆ ಯುಎನ್ ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿಯ ಪ್ರಕಾರ, ಸಂಘರ್ಷದ ಆರಂಭದಿಂದಲೂ ಉಕ್ರೇನ್‌ನಲ್ಲಿ ಸುಮಾರು 600 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದೆ.
ಇನ್ನು ಉಭಯ ದೇಶಗಳ ನಡುವೆ ಯುದ್ಧ ಪ್ರಾರಂಭವಾಗಿ ಈಗಾಗಲೇ 23 ದಿನಗಳ ಕಳೆಯುತ್ತಿವೆ. ಆದರೆ ಯುದ್ಧ ನಿಲ್ಲುವ ಪ್ರಸಂಗವೇ ಕಾಣುತ್ತಿಲ್ಲ. ಮುಂದೆ ಈ ಯುದ್ಧ ಯಾವರೀತಿ ತಿರುವು ಪಡೆದುಕೊಳ್ಳುತ್ತದೆ ಎಂಬುದು ಕಾದುನೋಡ್ಬೇಕಾಗುತ್ತದೆ.