ETV Bharat / international

ಕೋವಿಡ್ ಸೋಂಕಿತನೊಂದಿಗೆ ಸಂಪರ್ಕ: WHO ಮಹಾನಿರ್ದೇಶಕ ಸೆಲ್ಫ್​ ಕ್ವಾರಂಟೈನ್ - ಸೆಲ್ಫ್​ ಕ್ವಾರಂಟೈನ್​ಗೆ ಒಳಗಾಗ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್

ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಕೋವಿಡ್ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ಕಾರಣ ಸೆಲ್ಫ್​ ಕ್ವಾರಂಟೈನ್​ಗೆ ಆಗಿದ್ದಾರೆ.

WHO director general self-isolates
WHO ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್
author img

By

Published : Nov 2, 2020, 7:51 AM IST

ಜಿನೀವಾ: ಕೊರೊನಾ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ಕಾರಣ ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಸ್ವಯಂ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

"ಕೋವಿಡ್-19 ಸೋಂಕಿತ ವ್ಯಕ್ತಿಯೊಬ್ಬರ ಸಂಪರ್ಕಕ್ಕೆ ಬಂದಿದ್ದೇನೆ ಎಂದು ಗುರ್ತಿಸಲಾಗಿದೆ. ನಾನು ಚೆನ್ನಾಗಿದ್ದು, ರೋಗದ ಯಾವುದೇ ಲಕ್ಷಣಗಳಿಲ್ಲ. ಆದರೆ ವಿಶ್ವ ಆರೋಗ್ಯ ಸಂಸ್ಥೆಯ ಪ್ರೋಟೋಕಾಲ್​ನಂತೆ ಸ್ವಯಂ ಕ್ವಾರಂಟೈನ್​ಗೆ ಒಳಗಾಗುತ್ತೇನೆ ಮತ್ತು ಮನೆಯಿಂದ ಕೆಲಸ ಮಾಡುತ್ತೇನೆ" ಎಂದು ಘೆಬ್ರೆಯೆಸಸ್ ಟ್ವೀಟ್ ಮಾಡಿದ್ದಾರೆ.

  • I have been identified as a contact of someone who has tested positive for #COVID19. I am well and without symptoms but will self-quarantine over the coming days, in line with @WHO protocols, and work from home.

    — Tedros Adhanom Ghebreyesus (@DrTedros) November 1, 2020 " class="align-text-top noRightClick twitterSection" data=" ">

ಸಾಂಕ್ರಾಮಿಕ ರೋಗದ ಮಧ್ಯೆ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸುವುದರಿಂದ ಸೋಂಕು ಹರಡುವುದನ್ನು ತಡೆಯಬಹುದು ಮತ್ತು ಆರೋಗ್ಯ ವ್ಯವಸ್ಥೆಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುವುದು ಮುಖ್ಯವಾಗಿದೆ ಎಂದು ಒತ್ತಿ ಹೇಳಿದ್ದಾರೆ.

"ವಿಶ್ವ ಆರೋಗ್ಯ ಸಂಸ್ಥೆ ಸಹೋದ್ಯೋಗಿಗಳು ಮತ್ತು ನಾನು, ಜೀವಗಳನ್ನು ಉಳಿಸಲು ಮತ್ತು ದುರ್ಬಲರನ್ನು ರಕ್ಷಿಸಲು ಪಾಲುದಾರರಾಗಿ ಒಗ್ಗಟ್ಟಿನಿಂದ ತೊಡಗಿಸಿಕೊಳ್ಳುತ್ತೇವೆ" ಎಂದು ಘೆಬ್ರೆಯೆಸಸ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.