ಜೆರುಸಲೇಂ: ಉತ್ತರ ಇಸ್ರೇಲ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜನಸಂದಣಿಯಿಂದಾಗಿ ಕಾಲ್ತುಳಿತಕ್ಕೆ ಒಳಗಾಗಿ 40 ಜನರು ಮೃತಪಟ್ಟಿದ್ದು, 103 ಮಂದಿ ಗಾಯಗೊಂಡಿದ್ದಾರೆ.
ನಿನ್ನೆ ಲಾಗ್ ಬಿ ಒಮರ್ ರಜಾದಿನದ ಪ್ರಯುಕ್ತ ಮೌಂಟ್ ಮೆರಾನ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೃಹತ್ ಸಂಖ್ಯೆಯಲ್ಲಿ ಅಲ್ಲಿ ಜನರು ನೆರೆದಿದ್ದರು. ಈ ವೇಳೆ ಕಾಲ್ತುಳಿತಕ್ಕೆ ಜನರು ಒಳಗಾಗಿದ್ದಾರೆ. ಆದರೆ ದಿಢೀರ್ ಕಾಲ್ತುಳಿತ ಸಂಭವಿಸಲು ಕಾರಣವೇನು ಎನ್ನುವುದರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.
ಇದನ್ನೂ ಓದಿ: ಮೈಸೂರು: ಪತ್ನಿಯ ಶೀಲ ಶಂಕಿಸಿ ಕುಟುಂಬದ ನಾಲ್ವರನ್ನು ಕೊಂದ ಪಾಪಿ ಅಂದರ್
ಸ್ಥಳಕ್ಕೆ ಧಾವಿಸಿದ 6 ಹೆಲಿಕಾಪ್ಟರ್ಗಳು, 10ಕ್ಕೂ ಹೆಚ್ಚು ಆ್ಯಂಬುಲೆನ್ಸ್ಗಳ ಮೂಲಕ ರಕ್ಷಣಾ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಗಾಯಗೊಂಡವರ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.