ETV Bharat / international

ಸಿರಿಯಾದಲ್ಲಿ ವೈಮಾನಿಕ ದಾಳಿ, 50ಕ್ಕೂ ಹೆಚ್ಚು ಬಂಡುಕೋರರ ಹತ್ಯೆ

author img

By

Published : Oct 26, 2020, 7:51 PM IST

ಬಂಡುಕೋರರ ತರಬೇತಿ ಶಿಬಿರದ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ​ 50ಕ್ಕೂ ಹೆಚ್ಚು ಮಂದಿ ಬಂಡುಕೋರರು ಸಿರಿಯಾದಲ್ಲಿ ಸಾವನ್ನಪ್ಪಿದ್ದಾರೆ.

rebel fighters killed
ಬಂಡುಕೋರರ ಹತ್ಯೆ

ಬೈರುತ್ (ಸಿರಿಯಾ): ವಾಯವ್ಯ ಸಿರಿಯಾದಲ್ಲಿರುವ ಬಂಡುಕೋರರ ತರಬೇತಿ ಶಿಬಿರದ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ​ ಸುಮಾರು 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ ಎಂದು ಸಿರಿಯಾ ಸರ್ಕಾರ ಮಾಹಿತಿ ನೀಡಿದೆ.

ಇಡ್ಲಿಬ್ ಪ್ರಾಂತ್ಯದಲ್ಲಿ ವೈಮಾನಿಕ ದಾಳಿ ನಡೆಸಲಾಗಿದ್ದು, ಟರ್ಕಿ ಬೆಂಬಲಿತ ಫಾಲಿಕ್ ಅಲ್​ ಶಾಮ್ ಸಂಘಟನೆಯ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಸಂಘಟನೆಯ ಕೆಲವು ನಾಯಕರು ಸಾವನ್ನಪ್ಪಿದ್ದಾರೆ. ಅವರಲ್ಲಿ ಜಬಲ್ ಅಲ್​ ದ್ವೇಲಿಯಾ ಕೂಡಾ ಒಬ್ಬರು ಎಂದು ಹೇಳಲಾಗಿದೆ.

ಈ ಬಗ್ಗೆ ಸಿರಿಯಾದಲ್ಲಿರುವ ಬ್ರಿಟನ್ ಮೂಲದ ಸಿರಿಯನ್ ಅಬ್ಸರ್ವೇಟರಿ ಫಾರ್ ಹ್ಯೂಮನ್ ರೈಟ್ಸ್ ಕೂಡಾ ಈ ಘಟನೆಯಲ್ಲಿ ಸಂಭವಿಸಿದ ಸಾವು-ನೋವುಗಳ ಬಗ್ಗೆ ವರದಿ ಮಾಡಿದೆ.

ಬಂಡುಕೋರರು ಹಾಗೂ ಸರ್ಕಾರ ನಡುವೆ ಘರ್ಷಣೆಗಳು ಇಲ್ಲಿ ಸಾಮಾನ್ಯವಾಗಿವೆ. ಆದರೆ ಕೆಲವು ದಿನಗಳ ಹಿಂದೆ ಸಿರಿಯಾ ರಾಜಧಾನಿ ಡಮಾಸ್ಕಸ್​ನ ದಕ್ಷಿಣ ಭಾಗದಲ್ಲಿ ಕ್ಷಿಪಣಿ ದಾಳಿ ಮಾಡಿದ್ದರ ಪರಿಣಾಮ ಇಬ್ಬರು ಸೈನಿಕರು ಸಾವನ್ನಪ್ಪಿ, ಏಳು ಮಂದಿ ಗಾಯಗೊಂಡಿದ್ದರು. ಈ ಕ್ಷಿಪಣಿ ದಾಳಿಯನ್ನು ಇಸ್ರೇಲ್​ ನಡೆಸಿದೆ ಎಂಬ ಆರೋಪಗಳೂ ಕೇಳಿಬಂದಿದ್ದವು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.