ETV Bharat / international

ಸಂಸತ್ತಿನಲ್ಲಿ ಅತ್ಯಾಚಾರಕ್ಕೊಳಗಾಗಿದ್ದೆ ಎಂದ ಮಹಿಳೆಯ ಕ್ಷಮೆ ಕೇಳಿದ ಆಸ್ಟ್ರೇಲಿಯಾ ಪಿಎಂ!

author img

By

Published : Feb 16, 2021, 5:50 PM IST

ಸಹದ್ಯೋಗಿಯೊಬ್ಬರಿಂದ ತಾವು ಸಂಸತ್​ನೊಳಗೆ ಅತ್ಯಾಚಾರಕ್ಕೊಳಗಾಗಿದ್ದೆ ಎಂದು ಹೇಳಿಕೊಂಡಿರುವ ಮಹಿಳೆ ಬಳಿ ಆಸ್ಟ್ರೇಲಿಯಾದ ಪ್ರಧಾನಿ ಇದೀಗ ಕ್ಷಮೆಯಾಚನೆ ಮಾಡಿದ್ದಾರೆ.

Australian PM
Australian PM

ಕ್ಯಾನ್​ಬೆರಾ: ಸಂಸತ್ತಿನಲ್ಲಿ ಅತ್ಯಾಚಾರಕ್ಕೊಳಗಾಗಿದ್ದೆ ಎಂದು ಹೇಳಿಕೆ ನೀಡಿದ್ದ ಮಹಿಳೆಯ ಬಳಿ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಇದೀಗ ಕ್ಷಮೆಯಾಚನೆ ಮಾಡಿದ್ದಾರೆ. ಜತೆಗೆ ಪ್ರಕರಣದ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ಪ್ರಧಾನಿ ಕಚೇರಿಯ ಸಿಬ್ಬಂದಿಯಿಂದ ತಾನು ಅತ್ಯಾಚಾರಕ್ಕೊಳಗಾಗಿದ್ದೆ ಎಂದು ಮಹಿಳೆ ಹೇಳಿಕೊಂಡಿದ್ದಳು. ಜತೆಗೆ ತಾನು ಕೆಲಸ ಕಳೆದುಕೊಳ್ಳುವ ಭಯದಲ್ಲಿ ಇದರ ಬಗ್ಗೆ ಯಾರಿಗೂ ಮಾಹಿತಿ ನೀಡಿರಲಿಲ್ಲ ಎಂದು ಆಕೆ ಇದೀಗ ಹೇಳಿಕೊಂಡಿದ್ದಾಳೆ. 2019ರಲ್ಲಿ ನಡೆದ ಘಟನೆ ಇದಾಗಿದೆ ಎಂದು ಟಿವಿ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಳು. 2019ರ ಮಾರ್ಚ್​ನಲ್ಲಿ ಮೋರಿಸ್​ನರ ಆಡಳಿತಾರೂಢ ಲಿಬರಲ್ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತಾವು ಸಂಸತ್​ನೊಳಗೆ ಅತ್ಯಾಚಾರಕ್ಕೊಳಗಾಗಿದ್ದಾಗಿ ಆಕೆ ಹೇಳಿಕೊಂಡಿದ್ದಳು.

ಓದಿ: ಭಾರಿ ಹಿಮಪಾತಕ್ಕೆ ಹೆಪ್ಪುಗಟ್ಟಿದ ಟೆಕ್ಸಸ್​: 120 ಅಪಘಾತ, ವಿದ್ಯುತ್​ ತುರ್ತು ಪರಿಸ್ಥಿತಿ ಘೋಷಣೆ!

ಮಹಿಳೆ ಮಾಹಿತಿ ನೀಡುತ್ತಿದ್ದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಇದೇ ವಿಚಾರವಾಗಿ ಪ್ರಧಾನಿ ಕ್ಷಮೆಯಾಚನೆ ಮಾಡಿದ್ದಾರೆ. ಜತೆಗೆ ಈ ರೀತಿಯ ಘಟನೆಗಳು ನಡೆಯಬಾರದು, ಪ್ರಧಾನಿ ಕಚೇರಿ ಮಹಿಳೆಯರಿಗೆ ಸುರಕ್ಷಿತವಾಗಿರುತ್ತದೆ ಎಂದು ನಾನು ಆಶ್ವಾಸನೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.