ಅಂಕಾರ(ಟರ್ಕಿ): ಟರ್ಕಿಯ ಪಶ್ಚಿಮ ಇಜ್ಮಿರ್ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ ಎಂದು ದೇಶದ ವಿಪತ್ತು ಮತ್ತು ತುರ್ತುಸ್ಥಿತಿ ನಿರ್ವಹಣಾ ಪ್ರಾಧಿಕಾರ (ಎಎಫ್ಎಡಿ ) ತಿಳಿಸಿದೆ.
"ಇತ್ತೀಚಿನ ಮಾಹಿತಿಯ ಪ್ರಕಾರ, 73 ಜನರು ಸಾವನ್ನಪ್ಪಿದ್ದು, 961 ಮಂದಿ ಗಾಯಗೊಂಡಿದ್ದಾರೆ" ಎಂದು ಎಎಫ್ಎಡಿ ಹೇಳಿಕೆಯಲ್ಲಿ ತಿಳಿಸಿದೆ.
ಭೂಕಂಪನದಿಂದಾಗಿ ಸುಮಾರು 40ಕ್ಕೂ ಹೆಚ್ಚು ಕಟ್ಟಡಗಳು ಸಂಪೂರ್ಣವಾಗಿ ನಾಶವಾಗಿದ್ದು, ಆದರೆ ಒಂದು ಸಾವಿರಕ್ಕೂ ಹೆಚ್ಚು ಕಟ್ಟಡಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಟರ್ಕಿಯ ಪರಿಸರ ಮತ್ತು ನಗರೀಕರಣ ಸಚಿವ ಮುರತ್ ಕುರುಮ್ ಹೇಳಿದ್ದಾರೆ.