ಕೈರೋ: ಈಜಿಪ್ಟ್ ರಾಜಧಾನಿ ಕೈರೋದಲ್ಲಿ ಶನಿವಾರ ಸಂಭವಿಸಿದ ವಸತಿ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 23 ಕ್ಕೆ ಏರಿಕೆಯಾಗಿದೆ ಎಂದು ನಾಗರಿಕ ರಕ್ಷಣಾ ಸೇನೆ ತಿಳಿಸಿದೆ.
ಪೂರ್ವ ಕೈರೋದಲ್ಲಿನ ಜಿಸ್ರ್ ಅಲ್ - ಸೂಯೆಜ್ ಜಿಲ್ಲೆಯಲ್ಲಿ ಶನಿವಾರ 10 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿತ್ತು. ಪರಿಣಾಮ 25 ಮಂದಿ ಗಾಯಗೊಂಡಿದ್ದು, ಈವರೆಗೆ ಒಟ್ಟು 23 ಜನ ಸಾವನ್ನಪ್ಪಿದ್ದಾರೆ. ಕಟ್ಟಡ ಕುಸಿತಕ್ಕೆ ಇನ್ನೂ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ ಎಂದು ನಾಗರಿಕ ರಕ್ಷಣಾ ಸೇನೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಕಟ್ಟಡ ಮಾಲೀಕರು ಕಾನೂನು ಬಾಹಿರವಾಗಿ ಈ ಕಟ್ಟಡಕ್ಕೆ ಐದು ಮಹಡಿಗಳನ್ನು ಹೆಚ್ಚುವರಿಯಾಗಿ ಸೇರಿಸಿ ಕಟ್ಟಡ ನಿರ್ಮಾಣ ನಿಯಮ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ದುರಂತ ಸಂಭವಿಸಿದೆ ಎಂದು ಈಜಿಪ್ಟ್ನ ಕೆಲ ಮಾಧ್ಯಮಗಳು ವರದಿ ಮಾಡಿವೆ.