ಬೈರುತ್: ಲೆಬನಾನ್ ರಾಜಧಾನಿ ಬೈರುತ್ನ ಬಂದರು ಪ್ರದೇಶದಲ್ಲಿ ಆಗಸ್ಟ್ 3ರಂದು ಅಮೋನಿಯಂ ನೈಟ್ರೇಟ್ ಸ್ಫೋಟಗೊಂಡು 170ಕ್ಕೂ ಅಧಿಕ ಜನರು ಸಾವನ್ನಪ್ಪಿ, ಅನೇಕರು ಗಂಭೀರವಾಗಿ ಗಾಯಗೊಂಡಿದ್ದ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಇದೀಗ ಅದೇ ಜಾಗದಲ್ಲಿ ಮತ್ತೊಮ್ಮೆ ಅಗ್ನಿ ಅನಾಹುತ ಸಂಭವಿಸಿದೆ.
ಬೈರುತ್ ಸ್ಫೋಟದ ಹೊಣೆ ಹೊತ್ತು ರಾಜೀನಾಮೆ ನೀಡಿದ ಪ್ರಧಾನಿ ಹಸನ್ ದಿಯಾಬ್!
ಬಂದರು ಪ್ರದೇಶದಲ್ಲಿ ಟೈರ್ ಇಡುವ ಗೋದಾಮಿನಲ್ಲಿ ದಿಢೀರ್ ಆಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಲ್ಲಿನ ಸುದ್ದಿ ಸಂಸ್ಥೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ಭಾಗಿಯಾಗಿದೆ. ಸುಮಾರು 3 ಸಾವಿರ ಟನ್ ಅಮೋನಿಯಂ ನೈಟ್ರೇಟ್ ಸ್ಫೋಟಗೊಂಡ ತಿಂಗಳ ಬಳಿಕ ಮತ್ತೊಂದು ಅಗ್ನಿ ಅವಘಡ ಸಂಭವಿಸಿರುವುದು ಅಲ್ಲಿನ ಜನರಲ್ಲಿ ಮತ್ತಷ್ಟು ಭೀತಿ ಹುಟ್ಟಿಸಿದೆ. ಬೆಂಕಿ ಕಾಣಿಸಿಕೊಂಡಿರುವುದಕ್ಕೆ ಕಾರಣ ಏನು ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ.
ಹಿಂದಿನ ತಿಂಗಳು ಲೆಬನಾನ್ ರಾಜಧಾನಿ ಬೈರುತ್ನಲ್ಲಿ ಸಂಭವಿಸಿದ ಭೀಕರ ಸ್ಫೋಟದ ನೈತಿಕ ಹೊಣೆ ಹೊತ್ತು ಅಲ್ಲಿನ ಪ್ರಧಾನಿ ಹಸನ್ ದಿಯಾಬ್ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಈ ಘಟನೆಯಿಂದ ಇಡೀ ಜಗತ್ತು ಬೆಚ್ಚಿ ಬಿದ್ದಿತ್ತು.