ಇಸ್ಲಾಮಾಬಾದ್(ಪಾಕಿಸ್ತಾನ): 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಸಯೀದ್ ಹಫೀಜ್ಗೆ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯ 31 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದರ ಜೊತೆಗೆ 3 ಲಕ್ಷ 10 ಸಾವಿರ ರೂಪಾಯಿ ದಂಡ ಸಹ ವಿಧಿಸಿದೆ. ಭಯೋತ್ಪಾದನೆಗೆ ಕುಮ್ಮಕ್ಕು ನೀಡಲು ಹಣ ನೀಡಿರುವ ಎರಡು ಪ್ರಕರಣಗಳಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
-
Pakistan anti-terrorism court sentences Lashkar-e-Taiba chief Hafiz Saeed to 31 years in jail: Pakistan media
— ANI (@ANI) April 8, 2022 " class="align-text-top noRightClick twitterSection" data="
(file pic) pic.twitter.com/ndrNG6dmzK
">Pakistan anti-terrorism court sentences Lashkar-e-Taiba chief Hafiz Saeed to 31 years in jail: Pakistan media
— ANI (@ANI) April 8, 2022
(file pic) pic.twitter.com/ndrNG6dmzKPakistan anti-terrorism court sentences Lashkar-e-Taiba chief Hafiz Saeed to 31 years in jail: Pakistan media
— ANI (@ANI) April 8, 2022
(file pic) pic.twitter.com/ndrNG6dmzK
ಹಫೀಜ್ ಸಯೀದ್ ಎಲ್ಲ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಪಾಕಿಸ್ತಾನದ ಆ್ಯಂಟಿ ಟೆರರ್ ಕೋರ್ಟ್ ಆದೇಶ ಹೊರಡಿಸಿದೆ. ಸದ್ಯ ಲಾಹೋರ್ ಜೈಲಿನಲ್ಲಿರುವ ಹಫೀಜ್ ವಿರುದ್ಧ ಒಟ್ಟು 41 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 25 ಪ್ರಕರಣಗಳು ಇತ್ಯರ್ಥಗೊಂಡಿವೆ. ಇದೀಗ ಎರಡು ಪ್ರಕರಣಗಳಲ್ಲಿ ಅವರಿಗೆ ಶಿಕ್ಷೆ ವಿಧಿಸಲಾಗಿದೆ.
2008ರಲ್ಲಿ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯದಲ್ಲಿ ಭಾಗಿಯಾಗಿದ್ದ ಹಫೀಜ್ ಒಟ್ಟು 161 ಅಮಾಯಕರ ಸಾವಿಗೆ ಕಾರಣವಾಗಿದ್ದರು. 2019ರಲ್ಲಿ ಲಾಹೋರ್ನಿಂದ ಗುಜ್ರಾನ್ವಾಲಾಗೆ ತೆರಳುತ್ತಿದ್ದ ವೇಳೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ದಳ ಬಂಧನ ಮಾಡಿತ್ತು. ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸಿನ ನೆರವು ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಳೆದ ಡಿಸೆಂಬರ್ ತಿಂಗಳಲ್ಲಿ 15 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು.