ETV Bharat / international

ಕಾಬೂಲ್‌ನ ಶಿಕ್ಷಣ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್​ ದಾಳಿ: ಪರೀಕ್ಷೆ ತಯಾರಿಯಲ್ಲಿದ್ದ ವಿದ್ಯಾರ್ಥಿಗಳು ಸೇರಿ 19 ಜನರ ಸಾವು

ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಶಿಕ್ಷಣ ಕೇಂದ್ರದಲ್ಲಿ ಆತ್ಮಾಹುತಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ.

19-dead-in-suicide-blast-at-kabul-educational-centre
ಕಾಬೂಲ್‌ನ ಶಿಕ್ಷಣ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್​ ದಾಳಿ
author img

By

Published : Sep 30, 2022, 4:25 PM IST

ಕಾಬೂಲ್ (ಆಫ್ಘಾನಿಸ್ತಾನ): ಕಾಬೂಲ್‌ನ ಶಿಕ್ಷಣ ಕೇಂದ್ರವೊಂದರಲ್ಲಿ ಆತ್ಮಾಹುತಿ ಬಾಂಬ್​ ದಾಳಿ ನಡೆದಿದ್ದು, ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ಈ ಬಾಂಬ್​ ದಾಳಿ ಮಾಡಲಾಗಿದೆ.

ಕಾಬೂಲ್‌ನ ದಷ್ಟಿ ಬರ್ಚಿ ನೆರೆಹೊರೆಯಲ್ಲಿನ ಖಾಸಗಿ ಕಾಜ್ ಶಿಕ್ಷಣ ಕೇಂದ್ರದಲ್ಲಿ ಆತ್ಮಾಹುತಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಈ ಕೇಂದ್ರದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಈ ಸ್ಫೋಟದಿಂದ ತರಗತಿ ಕೊಠಡಿಗಳು ಸಂಪೂರ್ಣವಾಗಿ ಛಿದ್ರವಾಗಿದೆ.

ಮೃತ 19 ಜನರಲ್ಲಿ ಪದವೀಧರರು, ವಿದ್ಯಾರ್ಥಿನಿ, ವಿದ್ಯಾರ್ಥಿಗಳು ಸೇರಿದ್ದಾರೆ. ಇದರಲ್ಲಿ ಹೆಚ್ಚಾಗಿ ಅಫ್ಘಾನಿಸ್ತಾನದ ಅಲ್ಪಸಂಖ್ಯಾತ ಶಿಯಾ ಸಮುದಾಯದವರಾಗಿದ್ದಾರೆ. ಈ ಕೇಂದ್ರವನ್ನು ಕಾಜ್ ಹೈಯರ್ ಎಜುಕೇಷನಲ್ ಸೆಂಟರ್ ಎಂದು ಕರೆಯಲಾಗುತ್ತದೆ.

ಈ ಕೇಂದ್ರವು ವಿದ್ಯಾರ್ಥಿಗಳು ಕಾಲೇಜು ಪ್ರವೇಶ ಪರೀಕ್ಷೆಗಳಿಗೆ ತಯಾರಿ ಮತ್ತು ಅದರ ಚಟುವಟಿಕೆಗಳಲ್ಲಿ ಅಧ್ಯಯನ ಮಾಡಲು ಸಹಾಯ ಮಾಡುತ್ತಿತ್ತು. ಆತ್ಮಾಹುತಿ ಬಾಂಬ್​ ದಾಳಿ ನಡೆದಾಗ ಪ್ರವೇಶ ಪರೀಕ್ಷೆಯನ್ನು ತೆಗೆದುಕೊಳ್ಳಲಾಗುತ್ತಿತ್ತು ಎಂದು ವರದಿಯಾಗಿದೆ.

ಇನ್ನು, ಶಿಕ್ಷಣ ಕೇಂದ್ರದಲ್ಲಿ ನಡೆದ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಇನ್ನೂ ಹೊತ್ತಕೊಂಡಿಲ್ಲ. ಸದ್ಯದ ತಾಲಿಬಾನ್​ ಸರ್ಕಾರದ ಭದ್ರತಾ ತಂಡಗಳು ಸ್ಥಳಕ್ಕೆ ಧಾವಿಸಿದೆ. ಒಂದು ವಾರದ ಹಿಂದೆ ಕಾಬೂಲ್‌ನಲ್ಲಿ ನಡೆದ ಇದೇ ರೀತಿಯ ಸ್ಫೋಟದಲ್ಲಿ ಏಳು ಜನರು ಸಾವನ್ನಪ್ಪಿದ್ದರು ಮತ್ತು 41 ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿ: ಅಮೆರಿಕದಲ್ಲಿ ಗುಂಡಿನ ದಾಳಿ: ಐವರು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.