ಮನಿಲಾ (ಫಿಲಿಪ್ಪಿನ್ಸ್ ) : ಮಧ್ಯ ಫಿಲಿಪ್ಪಿನ್ಸ್ನ ಆಂಟಿಕ್ ಪ್ರಾಂತ್ಯದಲ್ಲಿ ಭೀಕರ ರಸ್ತೆ ಅಪಘಾತವೊಂದು ನಡೆದಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ವೊಂದು ದೊಡ್ಡ ಬಂಡೆಯಿಂದ ಉರುಳಿ ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
53 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್, ಇಲೋಯಿಲೋ ನಗರದಿಂದ ಪಶ್ಚಿಮಕ್ಕೆ ಆಂಟಿಕ್ ಪ್ರಾಂತ್ಯದ ಸ್ಯಾನ್ ಜೋಸ್ ಡಿ ಬ್ಯೂನಾವಿಸ್ಟಾಗೆ ತೆರಳುತ್ತಿದ್ದಾಗ ನಿನ್ನೆ ಸಂಜೆ 5 ಸುಮಾರಿಗೆ ಘಟನೆ ಜರುಗಿದೆ. ಇದಕ್ಕೂ ಮೊದಲು ಕಾಂಕ್ರೀಟ್ ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಬಳಿಕ ಬಂಡೆ ಮೇಲಿಂದ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕ ಕೂಡ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಕೀನ್ಯಾದ ಓರ್ವ ಪುರುಷ ಪ್ರಯಾಣಿಕ ಸೇರಿದಂತೆ ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ಇಲೋಯಿಲೋ ನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸಿ ಮೃತರ ಶವಗಳನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪ್ರಾಂತೀಯ ಸರ್ಕಾರವು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದೆ.
ಇದನ್ನೂ ಓದಿ : ಶ್ರೀನಗರ - ಲೇಹ್ ಹೆದ್ದಾರಿಯಲ್ಲಿ ಕಂದಕಕ್ಕೆ ಬಿದ್ದ ಕ್ಯಾಬ್ : ಕೇರಳದ ನಾಲ್ವರು ಪ್ರವಾಸಿಗರು ಸಾವು
ಕಂದಕಕ್ಕೆ ಬಿದ್ದ ಕ್ಯಾಬ್ : ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಕ್ಯಾಬ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ನಡೆದಿದೆ. ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮತ್ತೆ ಕೆಲವರು ನಾಪತ್ತೆಯಾಗಿದ್ದಾರೆ.
ಝೋಜಿಲ್ಲಾ ಪಾಸ್ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕ್ಯಾಬ್ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರ-ಲೇಹ್ ಹೆದ್ದಾರಿ ಮೂಲಕ ಪ್ರವಾಸಿಗರು ಸೋನಾಮಾರ್ಗ್‌ಗೆ ತೆರಳುತ್ತಿದ್ದರು. ಗಾಯಾಳುಗಳನ್ನು ಸೋನಾಮಾರ್ಗ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಇವರಲ್ಲಿ ಒಬ್ಬರನ್ನು ವಿಶೇಷ ಚಿಕಿತ್ಸೆಗಾಗಿ ಶ್ರೀನಗರ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ : ಕಂದಕಕ್ಕೆ ಉರುಳಿದ ಪ್ರವಾಸಿ ಟೆಂಪೋ ಟ್ರಾವೆಲರ್ : ಇಬ್ಬರು ಪ್ರವಾಸಿಗರು ಸಾವು
ಇನ್ನು ಕಳೆದ ಮೂರು ದಿನಗಳ ಹಿಂದೆ ಪ್ರವಾಸಿಗರಿದ್ದ ಟೆಂಪೋ ಟ್ರಾವೆಲರ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಇಬ್ಬರು ಮಹಿಳಾ ಪ್ರವಾಸಿಗರು ಮೃತಪಟ್ಟಿರುವ ಘಟನೆ ನೈನಿತಾಲ್‌ನ ಘಾಟ್‌ಗಢ ಬಳಿ ಸಂಭವಿಸಿತ್ತು. ಘಟನೆಯಿಂದ ಹಲವು ಪ್ರವಾಸಿಗರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗೆ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಉತ್ತರ ಪ್ರದೇಶದ ನೋಯ್ಡಾದಿಂದ ನೈನಿತಾಲ್‌ಗೆ ಆಗಮಿಸಿದ್ದ ಪ್ರವಾಸಿ ಟೆಂಪೋ ಟ್ರಾವೆಲರ್ ನಿಯಂತ್ರಣ ತಪ್ಪಿ ಘಾಟ್‌ಗಢದ ಬಳಿ ಆಳವಾದ ಕಂದಕಕ್ಕೆ ಬಿದ್ದಿದೆ. ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ, ಕಂದಕ್ಕೆ ಇಳಿದು ಗಾಯಾಳುಗಳನ್ನು ರಕ್ಷಿಸಲು ಮುಂದಾಗಿದ್ದಾರೆ. ನಂತರ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.
ಇದನ್ನೂ ಓದಿ : ಕಂದಕಕ್ಕೆ ಉರುಳಿದ ಪ್ರವಾಸಿ ಟೆಂಪೋ ಟ್ರಾವೆಲರ್ : ಇಬ್ಬರು ಪ್ರವಾಸಿಗರು ಸಾವು