ಲಾಂಜೌ(ಚೀನಾ): ವಾಯವ್ಯ ಚೀನಾದ ಗನ್ಸು ಪ್ರಾಂತ್ಯದಲ್ಲಿ ಗುರುವಾರ ರಾತ್ರಿ ಕಾರ್ಖಾನೆಯೊಂದು ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದರೆ, ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಜೋರಾಗಿ ಸಾಗಿದ್ದು, ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಚೀನಾದ ಪ್ರಾಂತೀಯ ರಾಜಧಾನಿ ಲಾಂಜೌನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದೆ.
ಇನ್ನೂ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಇದನ್ನು ಓದಿ:ಶೇ 0.75ರಷ್ಟು ದಾಖಲೆ ಮಟ್ಟದ ಬಡ್ಡಿದರ ಏರಿಸಿದ ಫೆಡರಲ್ ಬ್ಯಾಂಕ್.. ಸಾಲ ಇನ್ನು ದುಬಾರಿ!!