ಜೆರುಸಲೇಂ: ಪ್ಯಾಲೇಸ್ತೇನಿಯನ್ ವೆಸ್ಟ್ ಬ್ಯಾಂಕ್ನಲ್ಲಿ ನಿರಾಶ್ರಿತರ ಬಗ್ಗೆ ವರದಿ ಮಾಡಲು ತೆರಳಿದ್ದ ಸಂದರ್ಭದಲ್ಲಿ ಇಸ್ರೇಲ್ ಸೇನೆಯ ಗುಂಡಿನ ದಾಳಿಗೆ ಜನಪ್ರೀಯ ಅಲ್-ಜಜೀರಾ ವಾಹಿನಿ ಪತ್ರಕರ್ತೆ ಸಾವನ್ನಪ್ಪಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ಯಾಲೇಸ್ಟೀನ್ ಆರೋಗ್ಯ ಇಲಾಖೆ ಮಾಹಿತಿ ಹಂಚಿಕೊಂಡಿದೆ.
ದಾಳಿಯ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶಿರೀನ್ ಅಬು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಇದರ ಜೊತೆಗೆ ಮತ್ತೊಬ್ಬ ಅಲ್-ಜಜೀರಾ ಪತ್ರಕರ್ತ ಅಲಿ ಸಮೌದಿ ಬೆನ್ನಿಗೆ ಗುಂಡು ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಹುತಾತ್ಮ ಯೋಧನಿಗೆ ರಾಷ್ಟ್ರಪತಿಗಳಿಂದ ಶೌರ್ಯ ಪ್ರಶಸ್ತಿ ಪ್ರದಾನ
PRESS ಎಂಬ ಪದ ಹೊಂದಿದ್ದ ಜಾಕೆಟ್ ಧರಿಸಿ ಕೆಲಸ ಮಾಡ್ತಿದ್ದ ಸಂದರ್ಭದಲ್ಲಿ ಇಸ್ರೇಲ್ ಸೇನೆಯ ಮೇಲೆ ಎದುರಾಳಿಗಳು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಗುಂಡು ಹಾರಿಸಲಾಗಿದೆ. ಈ ಸಂದರ್ಭದಲ್ಲೇ ಅವರು ಸಾವನ್ನಪ್ಪಿದ್ದು, ಘಟನೆಯ ತನಿಖೆ ನಡೆಸಲಾಗುವುದು ಎಂದು ಇಸ್ರೇಲ್ ಮಿಲಿಟರಿ ಹೇಳಿಕೊಂಡಿದೆ.
ಶಿರೀನ್ ಅಬು ಪ್ಯಾಲೆಸ್ತೇನ್ ನಲ್ಲಿರುವ ಅರಬ್ ಭಾಷೆಯ ಅಲ್-ಜಜೀರಾ ಚಾನಲ್ನ ಜನಪ್ರಿಯ ವರದಿಗಾರ್ತಿಯಾಗಿದ್ದು, ಇಸ್ರೆಲ್ ದಾಳಿ ಬಗ್ಗೆ ವರದಿ ಮಾಡಲು ತೆರಳಿದ್ದರು.