ETV Bharat / international

ಅಮೆರಿಕ ಡ್ರೋನ್ ದಾಳಿ: ಅಲ್-ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿ ಹತ್ಯೆ

ಯುಎಸ್ ಡ್ರೋನ್ ದಾಳಿಯಲ್ಲಿ ಅಲ್ ಖೈದಾ ನಾಯಕ ಅಯ್ಮಾನ್ ಅಲ್-ಜವಾಹಿರಿ ಸಾವನ್ನಪ್ಪಿದ್ದಾರೆ.

Al-Qaeda chief Ayman al-Zawahiri
ಅಲ್-ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿ
author img

By

Published : Aug 2, 2022, 6:28 AM IST

ವಾಷಿಂಗ್ಟನ್: ಅಫ್ಘಾನಿಸ್ತಾನದಲ್ಲಿ ಅಮೆರಿಕ ಡ್ರೋನ್ ದಾಳಿಯಲ್ಲಿ ಅಲ್-ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿ ಸಾವನ್ನಪ್ಪಿದ್ದಾರೆ ಎಂದು ಸೋಮವಾರ (ಸ್ಥಳೀಯ ಕಾಲಮಾನ) ವರದಿಯಾಗಿದೆ. ಟ್ವಿಟರ್‌ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಅವರ ಹತ್ಯೆಯನ್ನು ದೃಢಪಡಿಸಿದ್ದಾರೆ. ಜು. 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ವಾಯುದಾಳಿ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.

ಇಸ್ಲಾಮಿಕ್ ಎಮಿರೇಟ್‌ನ ಭದ್ರತೆ ಮತ್ತು ಗುಪ್ತಚರ ಸೇವೆಗಳು ಘಟನೆಯನ್ನು ತನಿಖೆ ಮಾಡಿದೆ ಮತ್ತು ಪ್ರಾಥಮಿಕ ಮಾಹಿತಿ ಪ್ರಕಾರ ಅಮೆರಿಕನ್ ಡ್ರೋನ್‌ನಿಂದ ದಾಳಿ ನಡೆಸಲಾಗಿದೆ. ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಯಾವುದೇ ನೆಪದಲ್ಲಿ ಈ ದಾಳಿಯನ್ನು ಬಲವಾಗಿ ಖಂಡಿಸುತ್ತದೆ ಮತ್ತು ಇದು ಅಂತಾರಾಷ್ಟ್ರೀಯ ತತ್ವಗಳು ಮತ್ತು ದೋಹಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಮುಜಾಹಿದ್ ಹೇಳಿದರು.

ಅಫ್ಘಾನಿಸ್ತಾನದಲ್ಲಿ ಅಲ್-ಖೈದಾ ವಿರುದ್ಧದ "ಯಶಸ್ವಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ" ಕುರಿತು ಅಧ್ಯಕ್ಷ ಜೋ ಬೈಡನ್ ರಾತ್ರಿ 7:30 ಕ್ಕೆ (ಸ್ಥಳೀಯ ಕಾಲಮಾನ) ಮಾತನಾಡಿದ್ದಾರೆ. ವಾರಾಂತ್ಯದಲ್ಲಿ ಯುನೈಟೆಡ್ ಸ್ಟೇಟ್ಸ್ ಅಫ್ಘಾನಿಸ್ತಾನದಲ್ಲಿ ಗಮನಾರ್ಹ ಅಲ್ ಖೈದಾ ಗುರಿಯ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆ ಯಶಸ್ವಿಯಾಗಿದೆ. ಅಲ್ ಖೈದಾ ನಾಯಕ ಅಯ್ಮಾನ್ ಅಲ್-ಜವಾಹಿರಿಯನ್ನು ಕೊಂದಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಭಯೋತ್ಪಾದಕ ನಾಯಕ ಇನ್ನಿಲ್ಲ, ನ್ಯಾಯವನ್ನು ನೀಡಲಾಗಿದೆ" ಎಂದು ಶ್ವೇತಭವನದಿಂದ ಸಂಜೆಯ ಭಾಷಣದಲ್ಲಿ ಘೋಷಿಸಿದ್ದಾರೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಶೇ. 70ರಷ್ಟು ಮಂದಿಗೆ ಕೋವಿಡ್: ಅಧ್ಯಕ್ಷ ಜೋ ಬೈಡನ್​ಗೂ ತಗುಲಿದ ಸೋಂಕು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.