ಹವಾನಾ, ಕ್ಯೂಬಾ : ಐಷಾರಾಮಿ ಹೋಟೆಲ್ನಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಸುಮಾರು 18 ಮಂದಿ ಸಾವನ್ನಪ್ಪಿ, 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕೃತ ಮೂಲಗಳು ವರದಿ ಮಾಡಿವೆ.
ಕ್ಯೂಬಾದ ಆರೋಗ್ಯ ಸಚಿವಾಲಯದ ಅಧಿಕಾರಿ ಜೂಲಿಯೊ ಗುರ್ರಾ ಅವರು ಅಂಕಿ-ಅಂಶಗಳನ್ನು ದೃಢಪಡಿಸಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಹೋಟೆಲ್ ಸರಟೋಗಾದಲ್ಲಿ ಶುಕ್ರವಾರ ಈ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಅನಿಲ ಸೋರಿಕೆ ಕಾರಣ ಎಂದು ಭಾವಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಗಾಯಾಳುಗಳಿಗೆ ರಕ್ತದಾನ ಮಾಡುತ್ತಿದ್ದಾರೆ ಎಂದು ಕ್ಯೂಬಾದ ಅಧ್ಯಕ್ಷೀಯ ಕಚೇರಿ ಟ್ವೀಟ್ನಲ್ಲಿ ಮಾಹಿತಿ ನೀಡಿದೆ.
ಸ್ಫೋಟದ ನಂತರ ಕ್ಯೂಬಾದ ಅಧ್ಯಕ್ಷ ಮಿಗುಯೆಲ್ ಡಯಾಜ್-ಕ್ಯಾನೆಲ್ ಸ್ಥಳಕ್ಕೆ ಭೇಟಿ ನೀಡಿ ನಂತರ ಹವಾನಾದಲ್ಲಿನ ಸ್ಥಳೀಯ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ವಿಚಾರಿಸಿದ್ದಾರೆ. ಸ್ಫೋಟ ಸಂಭವಿಸಿರುವ ಬಗ್ಗೆ ಇನ್ನೂ ತನಿಖೆ ನಡೆಸಲಾಗುತ್ತಿದ್ದು, ನಿಖರ ಕಾರಣ ತಿಳಿದು ಬರಬೇಕಿದೆ.
ಇದನ್ನೂ ಓದಿ: ಆರು ಅಂತಸ್ತಿನ ಕಟ್ಟಡ ಕುಸಿದು 53 ಜನ ಸಾವು, 10 ಜನರ ರಕ್ಷಣೆ.. ಶೋಧ ಕಾರ್ಯ ಮುಕ್ತಾಯ