ಕಾಬೂಲ್(ಅಫ್ಘಾನಿಸ್ತಾನ): ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣ ಬಳಿ ಇಂದು ಸಂಭವಿಸಿದ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ತಾಲಿಬಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಅಬ್ದುಲ್ ನಫೀ ಟಕ್ಕೂರ್ ಅಲ್ಲಿನ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದು, ಕಾಬೂಲ್‌ನ ಮಿಲಿಟರಿ ವಿಮಾನ ನಿಲ್ದಾಣದ ಮುಖ್ಯ ಗೇಟ್‌ಗೆ ಸಮೀಪದಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.
ಉತ್ತರ ತಖರ್ ಪ್ರಾಂತ್ಯದ ರಾಜಧಾನಿ ತಾಲೂಕನ್ ನಗರದಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ಕು ಜನರು ಗಾಯಗೊಂಡ ಮೂರು ದಿನಗಳ ನಂತರ ಈ ಸ್ಫೋಟ ಸಂಭವಿಸಿದೆ. ತಾಲಿಬಾನ್ ಭದ್ರತಾ ಕಮಾಂಡರ್ ಅಬ್ದುಲ್ ಮುಬಿನ್ ಸಫಿ ಸ್ಫೋಟದ ಬಗ್ಗೆ ದೃಢಪಡಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಇಲ್ಲಿ ಸ್ಫೋಟ ಪ್ರಕರಣ ಹೆಚ್ಚಾಗಿವೆ.
ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ದೇವಸ್ಥಾನಕ್ಕೆ ಬಂದಿದ್ದ ಎಂಟು ಜನರ ದುರ್ಮರಣ