ಕರಾಚಿ(ಪಾಕಿಸ್ತಾನ): ಕರಾಚಿ ವಿಶ್ವವಿದ್ಯಾಲಯದ ಆವರಣದಲ್ಲಿ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಚೀನಾದ ಮೂವರು ಪ್ರಜೆಗಳು ಸೇರಿದಂತೆ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಇದರ ಜೊತೆಗೆ ಅನೇಕರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮಾಹಿತಿ ನೀಡಿದ್ದು, ವಿಶ್ವವಿದ್ಯಾಲಯದ ಆವರಣದೊಳಗೆ ವ್ಯಾನ್ನಲ್ಲಿ 7-8 ಮಂದಿ ಪ್ರಯಾಣ ಮಾಡ್ತಿದ್ದರು. ಇದರಲ್ಲಿ ಚೀನಾದ ಮೂವರಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಕರಾಚಿ ವಿಶ್ವವಿದ್ಯಾಲಯದ ಕಂಪ್ಯೂಸಿಯಸ್ ಇನ್ಸ್ಟಿಟ್ಯೂಟ್ ಸಮೀಪದಲ್ಲಿ ವ್ಯಾನ್ನಲ್ಲಿ ತೆರಳುತ್ತಿದ್ದಾಗ ಸ್ಫೋಟವಾಗಿದೆ. ಇಬ್ಬರು ಚೀನಾದ ಯುವತಿಯರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಈಗಾಗಲೇ ಭದ್ರತಾ ತಂಡ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಇದನ್ನೂ ಓದಿ: ಉಕ್ರೇನ್ 3ನೇ ಮಹಾಯುದ್ಧವನ್ನು ಪ್ರಚೋದಿಸುತ್ತಿದೆ: ರಷ್ಯಾ ಎಚ್ಚರಿಕೆ
ಸ್ಫೋಟದಲ್ಲಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಗ್ತಿದೆ. ಇದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದೆ.