ETV Bharat / international

ಹಿಂದೂ ಮಹಾಸಾಗರದಲ್ಲಿ ಮುಳುಗಿದ ಚೀನಾ ದೋಣಿ: 39 ಮೀನುಗಾರರು ನಾಪತ್ತೆ

39 ಮೀನುಗಾರರಿದ್ದ ಹಡಗು ಆಳ ಸಮುದ್ರದಲ್ಲಿ ಮಗುಚಿ ಬಿದ್ದ ಘಟನೆ ನಡೆದಿದೆ. ಸದ್ಯಕ್ಕೆ ಅದರಲ್ಲಿದ್ದ ಯಾರೊಬ್ಬರೂ ಪತ್ತೆಯಾಗಿಲ್ಲ.

Chinese fishing vessel capsizes in Indian Ocean, 39 onboard missing

author img

By

Published : May 17, 2023, 10:56 AM IST

ಬೀಜಿಂಗ್ (ಚೀನಾ): ಹಿಂದೂ ಮಹಾಸಾಗರದಲ್ಲಿ ಮಂಗಳವಾರ ಚೀನಾ ದೇಶದ ಮೀನುಗಾರಿಕೆಯ ದೋಣಿ ಮುಳುಗಿದ್ದು, 39 ಮೀನುಗಾರರು ನಾಪತ್ತೆಯಾಗಿದ್ದಾರೆ ಎಂದು ಸಿಜಿಟಿಎನ್ ಸುದ್ದಿಸಂಸ್ಥೆ ವರದಿ ಮಾಡಿದೆ. ಕಣ್ಮರೆಯಾದ ಸಿಬ್ಬಂದಿ ಪೈಕಿ 17 ಚೀನಾ, 17 ಇಂಡೋನೇಷ್ಯಾ ಮತ್ತು ಐವರು ಫಿಲಿಪ್ಪೀನ್ಸ್‌ ದೇಶದ ಪ್ರಜೆಗಳು ಎಂದು ತಿಳಿದುಬಂದಿದೆ.

ನಾಪತ್ತೆಯಾಗಿರುವ ಸಿಬ್ಬಂದಿಯ ಪತ್ತೆಗೆ ಶೋಧ ಕಾರ್ಯ ನಡೆಸಲಾಗುತ್ತಿದೆ. ಮಂಗಳವಾರ ಬೆಳಗ್ಗೆ 3 ಗಂಟೆ ವೇಳೆಗೆ (ಬೀಜಿಂಗ್ ಕಾಲಮಾನ) ಘಟನೆ ನಡೆದಿದೆ. ತಕ್ಷಣ ರಕ್ಷಣಾ ವ್ಯವಸ್ಥೆ ಮಾಡುವಂತೆ ಹಾಗೂ ಈ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಹೆಚ್ಚುವರಿ ರಕ್ಷಣಾ ಪಡೆಗಳನ್ನು ನಿಯೋಜಿಸಲು ತುರ್ತು ಪ್ರತಿಕ್ರಿಯೆ ಕಾರ್ಯವಿಧಾನವನ್ನು ಸಕ್ರಿಯಗೊಳಿಸಲು ಕೃಷಿ ಮತ್ತು ಗ್ರಾಮೀಣ ವ್ಯವಹಾರಗಳ ಸಚಿವಾಲಯ, ಸಾರಿಗೆ ಸಚಿವಾಲಯ ಮತ್ತು ಶಾಂಡಾಂಗ್ ಪ್ರಾಂತ್ಯಕ್ಕೆ ಕ್ಸಿ ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ.

ಚೀನಾ ವಿದೇಶಾಂಗ ಸಚಿವಾಲಯ ಮತ್ತು ವಿದೇಶದಲ್ಲಿರುವ ಸಂಬಂಧಿತ ರಾಯಭಾರ ಕಚೇರಿಗಳು ತಕ್ಷಣ ರಕ್ಷಣಾ ಕಾರ್ಯವನ್ನು ಸಂಘಟಿಸಲು ಸಂಬಂಧಿತ ಸ್ಥಳೀಯ ಪಕ್ಷಗಳೊಂದಿಗೆ ಸಂಪರ್ಕ ಸಾಧಿಸುವಂತೆಯೂ ಸೂಚನೆ ನೀಡಿದ್ದಾರೆ. ಅಲ್ಲದೇ ಸುರಕ್ಷತೆಯ ಹಿನ್ನೆಲೆಯಲ್ಲಿ ಸದ್ಯಕ್ಕೆ ಆಳ ಸಮುದ್ರಕ್ಕೆ ಇಳಿಯದಂತೆ ನೋಡಿಕೊಳ್ಳಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋಚಾ ಚಂಡಮಾರುತಕ್ಕೆ ಮ್ಯಾನ್ಮಾರ್ ತತ್ತರ; ಸಾವಿನ ಸಂಖ್ಯೆ 81ಕ್ಕೇರಿಕೆ: ಬಾಂಗ್ಲಾದಲ್ಲೂ ಅಪಾರ ನಷ್ಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.