ETV Bharat / international

ಅಮೆರಿಕಕ್ಕೆ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಭೇಟಿ - ಚೀನಾ ವಿದೇಶಾಂಗ ಸಚಿವ ವಾಂಗ್​ ಯಿ

ಅಕ್ಟೋಬರ್ 26-28 ರವರೆಗೆ ಚೀನಾ ವಿದೇಶಾಂಗ ಸಚಿವ ವಾಂಗ್​ ಯಿ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಮೆರಿಕ - ಚೀನಾ ನಡುವೆ ಶೀತಲ ಸಮರ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಚೀನಾ ವಿದೇಶಾಂಗ ಸಚಿವರ ಚೀನಾ ಭೇಟಿ ಕುತೂಹಲ ಮೂಡಿಸಿದೆ.

Etv Bharatchinese-foreign-minister-wang-yi-to-visit-us-from-october-26-28
Etv Bharatಅಮೆರಿಕಕ್ಕೆ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಭೇಟಿ
author img

By PTI

Published : Oct 24, 2023, 6:42 AM IST

ವಾಷಿಂಗ್ಟನ್​( ಅಮೆರಿಕ); ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಮೂರು ದಿನಗಳ ಭೇಟಿಗಾಗಿ ಗುರುವಾರ ಅಮೆರಿಕಕ್ಕೆ ಮಹತ್ವದ ಭೇಟಿ ನೀಡಲಿದ್ದಾರೆ. ಬೀಜಿಂಗ್‌ನೊಂದಿಗೆ ಮುಕ್ತ ಸಂವಹನ ನಡೆಸಲು ಹಾಗೂ ಸಂಬಂಧಗನ್ನು ಬಲಗೊಳಿಸಲು ಅಮೆರಿಕ ಅಧ್ಯಕ್ಷ ಬೈಡನ್​ ಬಯಸಿರುವ ಹಿನ್ನೆಲೆಯಲ್ಲಿ ಈ ಭೇಟಿ ನಡೆಯುತ್ತಿದೆ. ಹದಗೆಟ್ಟಿರುವ ಸಂಬಂಧಗಳನ್ನು ಸರಿ ಪಡಿಸುವ ಭಾಗವಾಗಿ ಚೀನಾ ವಿದೇಶಾಂಗ ಸಚಿವರು, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಬ್ಲಿಂಕನ್ ಅಕ್ಟೋಬರ್ 26-28 ರವರೆಗೆ ವಾಷಿಂಗ್ಟನ್‌ನಲ್ಲಿ ಚೀನಾದ ತಮ್ಮ ಸಹವರ್ತಿ ವಾಂಗ್​ ಯಿ ಅವರ ಆತಿಥ್ಯ ವಹಿಸಲಿದ್ದಾರೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಸೋಮವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಮೆರಿಕ -ಚೀನಾ ಸಂಬಂಧವನ್ನು ಸರಿಪಡಿಸುವುದು ಹಾಗೂ ಜವಾಬ್ದಾರಿಯುತ ನಡವಳಿಕೆ ಮತ್ತು ಸಂವಹನದ ಮುಕ್ತ ಮಾರ್ಗಗಳನ್ನು ತೆರೆಯುವಂತೆ ಮಾಡುವ ಪ್ರಯತ್ನಗಳ ಭಾಗವಾಗಿ ಇಬ್ಬರೂ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸಲಿದ್ದಾರೆ ಎಂದು ಅಮೆರಿಕದ​ ವಿದೇಶಾಂಗ ಇಲಾಖೆ ತಿಳಿಸಿದೆ.

ವಾಷಿಂಗ್ಟನ್ ಮತ್ತು ಬೀಜಿಂಗ್ ನಡುವಿನ ಸಂಬಂಧಗಳು ಇತ್ತೀಚೆಗೆ ತೀವ್ರವಾಗಿ ಬಿಗಾಡಿಸಿವೆ. ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅಮೆರಿಕ ಮತ್ತು ಚೀನಾ ಪರಸ್ಪರ ಬಲ ಪ್ರದರ್ಶನಕ್ಕೆ ಮುಂದಾಗುತ್ತಿವೆ. 2018 ರ ಆರಂಭದಿಂದಲೂ ಉಭಯ ರಾಷ್ಟ್ರಗಳ ನಡುವೆ ವ್ಯಾಪಾರ ಯುದ್ಧದಲ್ಲಿ ನಿರತವಾಗಿವೆ, ಎರಡೂ ರಾಷ್ಟ್ರಗಳು ಪರಸ್ಪರರ ಸರಕುಗಳ ಮೇಲೆ ಆಮದು ಸುಂಕಗಳನ್ನು ಹೆಚ್ಚಿಸಿವೆ. ಇದು ವಿಶ್ವ ವ್ಯಾಪಾರದ ಮೇಲೆ ತೀವ್ರ ಪರಿಣಾಮ ಬೀರಿವೆ.

ಅಮೆರಿಕ ಹಿತಾಸಕ್ತಿ ಮತ್ತು ಮೌಲ್ಯಗಳನ್ನು ಮುನ್ನಡೆಸಲು ರಾಜತಾಂತ್ರಿಕತೆ ಮಾರ್ಗಗಳ ಮೂಲಕ ಸಂಧಾನ ಹಾಗೂ ಮಾತುಕತೆಯ ಹಾದಿಯನ್ನು ಬಳಸಿಕೊಳ್ಳಲು ಮುಂದುವರೆಸಿದೆ. ಉಭಯ ರಾಷ್ಟ್ರಗಳ ನಡುವೆ ಉಂಟಾಗಿರುವ ಮನಸ್ಥಾಪ, ಪರಸ್ಪರ ಸಹಕಾರ, ಬಹುರಾಷ್ಟ್ರೀಯ ಸವಾಲುಗಳಲ್ಲಿ ಪ್ರಗತಿ ಸಾಧಿಸುವ ಉದ್ದೇಶದಿಂದ ಈ ಭೇಟಿ ಮಹತ್ವ ಪಡೆದುಕೊಂಡಿದೆ ಎಂದು ಅಮೆರಿಕ ಸರ್ಕಾರದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಶ್ವದ ಎರಡು ದೊಡ್ಡ ಆರ್ಥಿಕತೆಗಳ ನಡುವಿನ ವ್ಯಾಪಾರ ಮತ್ತು ಆರ್ಥಿಕ ಸಂಬಂಧಗಳಲ್ಲಿನ ವ್ಯತ್ಯಾಸಗಳನ್ನು ಸರಿಪಡಿಸುವಂತೆ ಅಮೆರಿಕದ ಸಂಸದರು ಒತ್ತಾಯಿಸುತ್ತಿರುವ ಈ ಸಮಯದಲ್ಲಿ ಅಮೆರಿಕಕ್ಕೆ ಚೀನಾ ವಿದೇಶಾಂಗ ಸಚಿವರು ಭೇಟಿ ನೀಡುತ್ತಿದ್ದಾರೆ. ಮುಂದಿನ ತಿಂಗಳು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆಯಲಿರುವ ಪ್ರಾದೇಶಿಕ ಶೃಂಗಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್​​​ ನಡುವೆ ಪರಸ್ಪರ ಮಾತುಕತೆ ನಡೆಯುವ ಸಾಧ್ಯತೆ ಇದೆ. ಈ ಭೇಟಿ ಈಗ ಅಂತಾರಾಷ್ಟ್ರೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. (ಪಿಟಿಐ)

ಇದನ್ನು ಓದಿ: ಫ್ರಾನ್ಸ್, ಸ್ಪೇನ್ ಮತ್ತು ನೆದರ್ಲ್ಯಾಂಡ್ಸ್ ನಾಯಕರಿಗೆ ಹಮಾಸ್ ದಾಳಿ ಬಗ್ಗೆ ಮಾಹಿತಿ ನೀಡಿದ ಇಸ್ರೇಲ್ ಪಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.