ಸ್ಟಾಕ್‌ಹೋಮ್: ಮಹಿಳೆಯರ ಗಳಿಕೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಅವರ ಭಾಗವಹಿಸುವಿಕೆಯ ಬಗ್ಗೆ ಮೊದಲ ಸಮಗ್ರ ಮಾಹಿತಿ ನೀಡಿದ ಪ್ರಾಧ್ಯಾಪಕಿ ಕ್ಲೌಡಿಯಾ ಗೋಲ್ಡಿನ್ ಅವರಿಗೆ 2023 ನೇ ಸಾಲಿನ ಅರ್ಥಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿಯನ್ನು ಸೋಮವಾರ ಘೋಷಿಸಲಾಗಿದೆ.
2023 ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ ವಿಜೇತರಾದ ಕ್ಲೌಡಿಯಾ ಗೋಲ್ಡಿನ್ ಅವರು ಶತಮಾನಗಳಿಂದ ಮಹಿಳೆಯರ ಗಳಿಕೆ ಮತ್ತು ಅವರು ವಿವಿಧ ಕ್ಷೇತ್ರಗಳಲ್ಲಿ ಭಾಗವಹಿಸುವಿಕೆಯ ಮೊದಲ ಸಮಗ್ರ ಮಾಹಿತಿಯನ್ನು ಒದಗಿಸಿದ್ದಾರೆ. ಅವರ ಸಂಶೋಧನೆಯು ಲಿಂಗ ಅಂತರದ ಮೂಲ, ಬದಲಾವಣೆಯ ಕಾರಣಗಳನ್ನು ಬಹಿರಂಗಪಡಿಸುತ್ತದೆ ಎಂದು ನೊಬೆಲ್ ಪ್ರಶಸ್ತಿ ನೀಡುವ ರಾಯಲ್ ಸ್ವೀಡಿಸ್ ಅಕಾಡೆಮಿ ಅಭಿಪ್ರಾಯಪಟ್ಟಿದೆ.
-
BREAKING NEWS
— The Nobel Prize (@NobelPrize) October 9, 2023 " class="align-text-top noRightClick twitterSection" data="
The Royal Swedish Academy of Sciences has decided to award the 2023 Sveriges Riksbank Prize in Economic Sciences in Memory of Alfred Nobel to Claudia Goldin “for having advanced our understanding of women’s labour market outcomes.”#NobelPrize pic.twitter.com/FRAayC3Jwb
">BREAKING NEWS
— The Nobel Prize (@NobelPrize) October 9, 2023
The Royal Swedish Academy of Sciences has decided to award the 2023 Sveriges Riksbank Prize in Economic Sciences in Memory of Alfred Nobel to Claudia Goldin “for having advanced our understanding of women’s labour market outcomes.”#NobelPrize pic.twitter.com/FRAayC3JwbBREAKING NEWS
— The Nobel Prize (@NobelPrize) October 9, 2023
The Royal Swedish Academy of Sciences has decided to award the 2023 Sveriges Riksbank Prize in Economic Sciences in Memory of Alfred Nobel to Claudia Goldin “for having advanced our understanding of women’s labour market outcomes.”#NobelPrize pic.twitter.com/FRAayC3Jwb
20 ನೇ ಶತಮಾನದಲ್ಲಿ ಪ್ರಗತಿ ಹೆಚ್ಚಳ: ಕಾರ್ಮಿಕ ಮಾರುಕಟ್ಟೆಯಲ್ಲಿ ಸ್ತ್ರೀ ಭಾಗವಹಿಸುವಿಕೆಯು 200 ವರ್ಷಗಳ ಹಿಂದೆ ಮೇಲ್ಮುಖವಾಗಿರಲಿಲ್ಲ ಎಂಬುದನ್ನು ಗೋಲ್ಡಿನ್ ಪ್ರಸ್ತುತಪಡಿಸಿದ್ದಾರೆ. 19ನೇ ಶತಮಾನದ ಆರಂಭದಲ್ಲಿ ವಿವಾಹಿತ ಮಹಿಳೆಯರ ಭಾಗವಹಿಸುವಿಕೆಯು ಕಡಿಮೆಯಾಗಿತ್ತು. ಆದರೆ 20ನೇ ಶತಮಾನದ ಆರಂಭದಲ್ಲಿ ಸೇವಾ ಕ್ಷೇತ್ರದ ಬೆಳವಣಿಗೆಯೊಂದಿಗೆ ಮಹಿಳೆಯರು ಭಾಗವಹಿಸುವ ಸಂಖ್ಯೆ ಹೆಚ್ಚಾಗಲು ಪ್ರಾರಂಭಿಸಿತು ಎಂಬುದನ್ನು ಅವರು ನಿರೂಪಿಸಿದ್ದಾರೆ.
ಮನೆ ಮತ್ತು ಕುಟುಂಬದ ಅಭಿವೃದ್ಧಿಗಾಗಿ ಮಹಿಳೆಯರ ಹೊಣೆಗಾರಿಕೆ ಮತ್ತು ಅದರಿಂದಾದ ಆರ್ಥಿಕ ಅಭಿವೃದ್ಧಿಯನ್ನೂ ಅವರ ಸಾಮಾಜಿಕ ರೂಢಿಗಳು, ರಚನಾತ್ಮಕ ಬದಲಾವಣೆಯ ಮಾದರಿಯ ಮೇಲೆ ಅವರು ವಿವರಿಸಿದ್ದಾರೆ.
ಪುರುಷ-ಮಹಿಳಾ ಗಳಿಕೆಯ ಅಂತರ ಕಡಿಮೆ: 20ನೇ ಶತಮಾನದಲ್ಲಿ ಮಹಿಳೆಯರ ಶೈಕ್ಷಣಿಕ ಗುಣಮಟ್ಟ ನಿರಂತರವಾಗಿ ಹೆಚ್ಚುತ್ತಿದೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಮಹಿಳೆಯರು ಈಗ ಪುರುಷರಿಗಿಂತ ಗಣನೀಯವಾಗಿ ಪ್ರಗತಿ ಸಾಧಿಸುತ್ತಿದ್ದಾರೆ. ವೃತ್ತಿ ಯೋಜನೆಗೆ ಹೊಸ ಅವಕಾಶಗಳನ್ನು ನೀಡುವ ಮೂಲಕ ಈ ಕ್ರಾಂತಿಕಾರಿ ಬದಲಾವಣೆಯನ್ನು ವೇಗಗೊಳಿಸುವಲ್ಲಿ ಗರ್ಭನಿರೋಧಕ ಮಾತ್ರೆಗಳೂ ಪ್ರಮುಖ ಪಾತ್ರವನ್ನು ವಹಿಸಿವೆ ಎಂಬುದನ್ನು ಕ್ಲಾಡಿಯಾ ಗೋಲ್ಡಿನ್ ನಿರೂಪಿಸಿದ್ದಾರೆ.
20ನೇ ಶತಮಾನದಲ್ಲಿ ಆಧುನೀಕರಣ, ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗಸ್ಥ ಮಹಿಳೆಯರ ಹೆಚ್ಚುತ್ತಿರುವ ಪ್ರಮಾಣಗಳ ಹೊರತಾಗಿಯೂ, ದೀರ್ಘಕಾಲದವರೆಗೆ ಮಹಿಳೆಯರು ಮತ್ತು ಪುರುಷರ ನಡುವಿನ ಗಳಿಕೆಯ ಅಂತರ ದೊಡ್ಡ ಪ್ರಮಾಣದಲ್ಲಿ ಇಲ್ಲ ಎಂದೂ ಕ್ಲಾಡಿಯಾ ಶೋಧಿಸಿದ್ದಾರೆ.
ಇರಾನ್ ಹೋರಾಟಗಾರ್ತಿ ಶಾಂತಿ ನೊಬೆಲ್: ನೊಬೆಲ್ ಸಮಿತಿಯು 2023 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಇರಾನ್ ಹೋರಾಟಗಾರ್ತಿ ನರ್ಗೆಸ್ ಮೊಹಮ್ಮದಿ ಅವರಿಗೆ ಪ್ರಕಟಿಸಿದೆ. ಇರಾನ್‌ನಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ದಬ್ಬಾಳಿಕೆಯ ವಿರುದ್ಧದ ಹೋರಾಟ ಮತ್ತು ಸಮಾನ ಮಾನವ ಹಕ್ಕುಗಳು, ಸ್ವಾತಂತ್ರ್ಯವನ್ನು ಉತ್ತೇಜಿಸುವ ಅವಿರತ ಹೋರಾಟಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ. ನರ್ಗಿಸ್ ಮೊಹಮ್ಮದಿ ಸದ್ಯ ಇರಾನ್‌ನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.
ಇದನ್ನೂ ಓದಿ: ಇರಾನ್ ಹೋರಾಟಗಾರ್ತಿ ನರ್ಗಿಸ್ ಮೊಹಮ್ಮದಿಗೆ 2023ರ ನೊಬೆಲ್ ಶಾಂತಿ ಪ್ರಶಸ್ತಿ