ಅಫ್ಘಾನಿಸ್ತಾನ: ಫೈಜಾಬಾದ್ನಲ್ಲಿ ಕಳೆದ ರಾತ್ರಿ 2.07 ರ ಸುಮಾರಿಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.4 ರಷ್ಟು ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್ ಸೆಂಟರ್ ಆಫ್ ಸಿಸ್ಮೋಲಜಿ(ಎನ್ಸಿಎಸ್) ತಿಳಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಕಳೆದ ಜೂನ್ ತಿಂಗಳಲ್ಲಿ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 1,000 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. 1500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಸ್ಪೆರಾ, ಪಕ್ಟಿಕಾ ಪ್ರಾಂತ್ಯದ ಬರ್ಮಲಾ, ಜಿರುಕ್, ನಾಕಾ ಮತ್ತು ಗಯಾನ್ ಜಿಲ್ಲೆಗಳು ಭೂಕಂಪದಿಂದ ಭಾರಿ ಹಾನಿಗೊಳಗಾಗಿದ್ದವು.
ಇದನ್ನೂ ಓದಿ: ಗುಹಾ ದೇವಾಲಯದ ಸುತ್ತಮುತ್ತ ಹೆಚ್ಚು ಮಳೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ