ETV Bharat / international

75ನೇ ಗಣರಾಜ್ಯೋತ್ಸವಕ್ಕೆ ಆಹ್ವಾನ: ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಫ್ರಾನ್ಸ್ ಅಧ್ಯಕ್ಷ

ಪ್ರಧಾನಿ ಮೋದಿಯವರ ಆಹ್ವಾನದ ಮೇರೆಗೆ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು, 75ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

Emmanuel Macron  PM Modi
76ನೇ ಗಣರಾಜ್ಯೋತ್ಸವದ ಆಹ್ವಾನಕ್ಕಾಗಿ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
author img

By ETV Bharat Karnataka Team

Published : Dec 23, 2023, 9:12 AM IST

ಪ್ಯಾರಿಸ್ (ಫ್ರಾನ್ಸ್): 2024ರ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವ ಬಗ್ಗೆ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಶುಕ್ರವಾರ ಖಚಿತಪಡಿಸಿದ್ದಾರೆ. ಜೊತೆಗೆ ತಮಗೆ ಆಹ್ವಾನ ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮ್ಯಾಕ್ರನ್ ಧನ್ಯವಾದ ತಿಳಿಸಿದ್ದಾರೆ.

"ನಿಮ್ಮ ಆಹ್ವಾನಕ್ಕೆ ಧನ್ಯವಾದಗಳು, ನನ್ನ ಆತ್ಮೀಯ ಸ್ನೇಹಿತ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಗಣರಾಜ್ಯೋತ್ಸವ ಆಚರಣೆಯಲ್ಲಿ ಭಾಗವಹಿಸಲಿದ್ದೇನೆ" ಎಂದು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆ: ಪ್ರಧಾನಿ ಮೋದಿಯವರ ಆಹ್ವಾನದ ಮೇರೆಗೆ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ 75ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಿನ್ನೆ (ಶುಕ್ರವಾರ) ದೃಢಪಡಿಸಿತ್ತು. "ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾರತಕ್ಕೆ ಭೇಟಿ ನೀಡಲಿದ್ದಾರೆ" ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿತ್ತು.

ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು?: 75ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಸ್ವಾಗತಿಸಲು ಭಾರತ ಎದುರು ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. "ನನ್ನ ಆತ್ಮೀಯ ಸ್ನೇಹಿತ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್, ನಿಮ್ಮನ್ನು 75ನೇ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಸ್ವೀಕರಿಸಲು ನಾವು ಕುತೂಹಲದಿಂದ ಎದುರು ನೋಡುತ್ತಿದ್ದೇವೆ. ನಾವು ಭಾರತ - ಫ್ರಾನ್ಸ್ ನಡುವಿನ ಪಾಲುದಾರಿಕೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ನಂಬಿಕೆ ಹೊಂದಿದ್ದೇವೆ" ಎಂದು ಪ್ರಧಾನಿ ಮೋದಿ ಶುಕ್ರವಾರ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಗಣರಾಜ್ಯೋತ್ಸವದ ಆಚರಣೆಯಲ್ಲಿ ಫ್ರೆಂಚ್ ನಾಯಕರೊಬ್ಬರು ಮುಖ್ಯ ಅತಿಥಿಯಾಗಿರುವುದು ಇದು ಆರನೇ ಬಾರಿಯಾಗಿದೆ. ಮ್ಯಾಕ್ರನ್‌ ಅವರಿಗಿಂತ ಮುನ್ನ, ಮಾಜಿ ಫ್ರೆಂಚ್ ಪ್ರಧಾನಿ ಜಾಕ್ವೆಸ್ ಚಿರಾಕ್ ಅವರು 1976 ಮತ್ತು 1998 ರಲ್ಲಿ ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು. ಮಾಜಿ ಅಧ್ಯಕ್ಷರಾದ ವ್ಯಾಲೆರಿ ಗಿಸ್ಕಾರ್ಡ್ ಡಿಎಸ್ಟೇಂಗ್, ನಿಕೋಲಸ್ ಸರ್ಕೋಜಿ ಮತ್ತು ಫ್ರಾಂಕೋಯಿಸ್ ಹೊಲಾಂಡೆ ಅವರು ಕ್ರಮವಾಗಿ 1980, 2008 ಮತ್ತು 2016ರಲ್ಲಿ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

2023ರ ಜುಲೈನಲ್ಲಿ ಪ್ಯಾರಿಸ್‌ನಲ್ಲಿ ನಡೆದ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪಿಎಂ ಮೋದಿ ಗೌರವ ಅತಿಥಿಯಾಗಿದ್ದರು. ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಆಹ್ವಾನದ ಮೇರೆಗೆ ಮೋದಿ ಫ್ರಾನ್ಸ್​ಗೆ ಭೇಟಿ ನೀಡಿದ್ದರು. ಬಳಿಕ ಫ್ರೆಂಚ್ ಅಧ್ಯಕ್ಷರು ಕಳೆದ ಸೆಪ್ಟೆಂಬರ್‌ನಲ್ಲಿ ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಸಭೆಯನ್ನೂ ಕೂಡ ನಡೆಸಿದ್ದರು.

ಇದನ್ನೂ ಓದಿ: ಹಿನ್ನೋಟ: ಭಾರತದ ಜಿ20 ಅಧ್ಯಕ್ಷತೆಯಲ್ಲಿ ಹಲವು ಜಾಗತಿಕ ಸವಾಲುಗಳಿಗೆ ಪರಿಹಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.