ETV Bharat / international

ಇರಾಕ್‌ನಲ್ಲಿ ಭೀಕರ ಬೆಂಕಿ ಅವಘಡ: ಮದುವೆ ಮಂಟಪದಲ್ಲಿ ಕನಿಷ್ಠ 100 ಮಂದಿ ಸುಟ್ಟು ಕರಕಲು, 150ಕ್ಕೂ ಹೆಚ್ಚು ಮಂದಿಗೆ ಗಾಯ

author img

By PTI

Published : Sep 27, 2023, 7:22 AM IST

Updated : Sep 27, 2023, 11:33 AM IST

ಉತ್ತರ ಇರಾಕ್‌ನ ಮದುವೆ ಮಂಟಪವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 100 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Fire
ಇರಾಕ್‌ನಲ್ಲಿ ಭೀಕರ ಬೆಂಕಿ ಅವಘಡ

ಬಾಗ್ದಾದ್ (ಇರಾಕ್‌) : ಮದುವೆ ಮಂಟಪವೊಂದರಲ್ಲಿ ಸಂಭವಿಸಿದ ಭಾರಿ ಪ್ರಮಾಣದ ಅಗ್ನಿ ಅವಘಡದಿಂದಾಗಿ ಕನಿಷ್ಠ 100 ಜನರು ಸಾವನ್ನಪ್ಪಿದ್ದು, 150ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಉತ್ತರ ಇರಾಕ್‌ನಲ್ಲಿ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಧಾನಿ ಬಾಗ್ದಾದ್‌ನ ವಾಯುವ್ಯಕ್ಕೆ 335 ಕಿಲೋ ಮೀಟರ್ ದೂರದಲ್ಲಿರುವ ನಿನೆವೆ ಪ್ರಾಂತ್ಯದ ಹಮ್ದನಿಯಾ ಪ್ರದೇಶದಲ್ಲಿ ದುರಂತ ಘಟಸಿತು. ಇಲ್ಲಿ ಕ್ರಿಶ್ಚಿಯನ್ನರೇ ಹೆಚ್ಚಿನ ಪ್ರಮಾಣದಲ್ಲಿ ವಾಸಿಸುತ್ತಿದ್ದು, ಮದುವೆ ಸಭಾಂಗಣದೊಳಗೆ ಸುಟ್ಟುಹೋದ ಅವಶೇಷಗಳ ದೃಶ್ಯಾವಳಿಗಳನ್ನು ಸ್ಥಳೀಯ ಟೆಲಿವಿಷನ್ ಮಾಧ್ಯಮಗಳು ಪ್ರಸಾರ ಮಾಡಿವೆ. ಆರೋಗ್ಯ ಸಚಿವಾಲಯದ ವಕ್ತಾರ ಸೈಫ್ ಅಲ್ - ಬದರ್ ಘಟನೆಯ ಕುರಿತು ಬುಧವಾರ ಮಾಹಿತಿ ನೀಡಿದ್ದಾರೆ.

ಗಾಯಗೊಂಡವರಲ್ಲಿ ಕೆಲವರನ್ನು ಪ್ರಾದೇಶಿಕ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ನಿನೆವೆ ಪ್ರಾಂತೀಯ ಗವರ್ನರ್ ನಜೀಮ್ ಅಲ್ ಜುಬೌರಿ ಹೇಳಿದ್ದಾರೆ. ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲ. ಆದರೆ, ಸ್ಥಳೀಯ ಮೂಲಗಳಿಂದ ದೊರೆತ ಮಾಹಿತಿ ಪ್ರಕಾರ, ಪಟಾಕಿ ಹಚ್ಚಿರುವುದರಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ಕುರಿತು ತನಿಖೆ ಮುಂದುವರೆದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ನಾಗರಿಕ ರಕ್ಷಣೆ ಇಲಾಖೆ ಅಧಿಕಾರಿಗಳು, ಕಡಿಮೆ ವೆಚ್ಚದ ಸಾಮಗ್ರಿಗಳನ್ನು ಬಳಸಿ ಕಟ್ಟಡ ನಿರ್ಮಾಣ ಮಾಡಿದ ಪರಿಣಾಮ ಬೆಂಕಿ ಹೊತ್ತಿಕೊಂಡ ಕೆಲವೇ ನಿಮಿಷಗಳಲ್ಲಿ ಹಾಲ್‌ನ ಕೆಲ ಭಾಗಗಳು ಕುಸಿದಿವೆ. ಜೊತೆಗೆ, ಮದುವೆ ಮಂಟಪವು ಕಟ್ಟುನಿಟ್ಟಾದ ಸುರಕ್ಷತಾ ಮಾನದಂಡಗಳನ್ನು ಸಹ ಒಳಗೊಂಡಿರಲಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಜೋಹಾನ್ಸ್‌ಬರ್ಗ್ : ಬಹುಮಹಡಿ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತ, 73 ಮಂದಿ ಸಾವು

ಹಿಂದಿನ ಘಟನೆ: ದಕ್ಷಿಣ ಆಫ್ರಿಕಾದ ಅತಿದೊಡ್ಡ ನಗರ ಜೋಹಾನ್ಸ್‌ಬರ್ಗ್​​ನಲ್ಲಿ ಕಳೆದ ತಿಂಗಳ ಅಂತ್ಯದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಕನಿಷ್ಠ 73 ಜನರು ಸಾವಿಗೀಡಾಗಿದ್ದು, ಸುಮಾರು 52 ಮಂದಿ ಗಾಯಗೊಂಡಿದ್ದರು. ನಗರದ ಮಧ್ಯಭಾಗದಲ್ಲಿರುವ ಐದು ಅಂತಸ್ತಿನ ಕಟ್ಟಡದಲ್ಲಿ ತಡರಾತ್ರಿ 1:30 ರ ಸುಮಾರಿಗೆ ಅವಘಡ ಸಂಭವಿಸಿತ್ತು. ಈ ಬಹುಮಹಡಿ ಕಟ್ಟಡವು ವಲಸಿಗರಿಂದಲೇ ತುಂಬಿತ್ತು.

ಇದನ್ನೂ ಓದಿ : ಸಿಯಾಚಿನ್ ​: ಸೇನೆಯ ಟೆಂಟ್​ಗಳಲ್ಲಿ ಅಗ್ನಿ ದುರಂತ .. ಸೇನಾಧಿಕಾರಿ ಸಾವು , ಆರು ಯೋಧರಿಗೆ ಗಾಯ

ಈ ಹಿಂದೆ ಗಲಭೆಗಳ ಸಂದರ್ಭದಲ್ಲಿ ಕ್ರಿಮಿನಲ್‌ಗಳಿಂದ ಅಕ್ರಮಿಸಲ್ಪಟ್ಟ ಕಟ್ಟಡಗಳಲ್ಲಿ ಇದೂ ಕೂಡ ಒಂದಾಗಿತ್ತು. ಇಲ್ಲಿ ವಿದ್ಯುತ್​, ನೀರು ಸೇರಿದಂತೆ ಯಾವುದೇ ಮೂಲ ಸೌಕರ್ಯಗಳನ್ನು ಪುರಸಭೆ ಒದಗಿಸಿರಲಿಲ್ಲ. ಕಟ್ಟಡದೊಂದಿಗೆ ಸಣ್ಣ ಗುಂಪುಗಳಾಗಿ ನೂರಾರು ಜನರು ವಾಸ ಮಾಡುತ್ತಿದ್ದರು. ಬಹುತೇಕರು ಅಕ್ರಮ ವಲಸಿಗರೇ ಆಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದರು.

ಇದನ್ನೂ ಓದಿ : Khalistan radicals : ಅಮೆರಿಕದ ಭಾರತೀಯ ಕಾನ್ಸುಲೇಟ್‌ ಕಚೇರಿಗೆ ಬೆಂಕಿ ಹಚ್ಚಿದ ಖಲಿಸ್ತಾನಿ ಉಗ್ರರು: ವಿಡಿಯೋ

Last Updated : Sep 27, 2023, 11:33 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.