ETV Bharat / international

ವಿಶ್ವದಲ್ಲಿಯೇ ಭಾರತ & ಅಮೆರಿಕ ನಡುವಣ ಸ್ನೇಹ ಅತ್ಯಂತ ಪರಿಣಾಮಕಾರಿಯಾಗಿದೆ: ಬೈಡನ್​ ಟ್ವೀಟ್​ - ಪ್ರಧಾನಿ ಮೋದಿ

ಅಮೆರಿಕ ಮತ್ತು ಭಾರತದ ನಡುವಿನ ಸ್ನೇಹವು ಪ್ರಪಂಚದಲ್ಲೇ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಅಧ್ಯಕ್ಷ ಜೋ ಬೈಡನ್ ಟ್ವೀಟ್​​​ ಮಾಡಿ ಹೇಳಿದ್ದಾರೆ. ​

PM Modi and US President Joe Biden
ಮೋದಿ ಹಾಗೂ ಬೈಡನ್​
author img

By

Published : Jun 26, 2023, 8:20 AM IST

ವಾಷಿಂಗ್ಟನ್ ಡಿಸಿ(ಅಮೆರಿಕ): ಭಾರತದೊಂದಿಗಿನ ಸಂಬಂಧವನ್ನು ಶ್ಲಾಘಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಉಭಯ ರಾಷ್ಟ್ರಗಳ ನಡುವಿನ ಸ್ನೇಹವು "ವಿಶ್ವದಲ್ಲಿಯೇ ಅತ್ಯಂತ ಪರಿಣಾಮಕಾರಿ" ಎಂದು ಬಣ್ಣಿಸಿದ್ದಾರೆ. ಭಾನುವಾರ ಈ ಬಗ್ಗೆ ಟ್ವೀಟ್​​​ ಮಾಡಿದ ಅವರು "ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತದ ನಡುವಿನ ಸ್ನೇಹವು ಪ್ರಪಂಚದಲ್ಲೇ ಅತ್ಯಂತ ಪರಿಣಾಮಕಾರಿಯಾಗಿದೆ. ಮತ್ತು ಇದು ಹಿಂದೆಂದಿಗಿಂತಲೂ ಬಲವಾದ, ಹತ್ತಿರ ಮತ್ತು ಹೆಚ್ಚು ಕ್ರಿಯಾತ್ಮಕವಾಗಿದೆ" ಎಂದು ಬಣ್ಣಿಸಿದ್ದಾರೆ.

  • The friendship between the United States and India is among the most consequential in the world. And it's stronger, closer, and more dynamic than ever. pic.twitter.com/6B8iLCos3f

    — President Biden (@POTUS) June 25, 2023 " class="align-text-top noRightClick twitterSection" data=" ">

ಇದನ್ನೂ ಓದಿ: ಶ್ವೇತಭವನದಲ್ಲಿ ಪ್ರಧಾನಿ ಮೋದಿ: ಬೈಡನ್‌ ದಂಪತಿಯಿಂದ ಆತ್ಮೀಯ ಸ್ವಾಗತ

ಬೈಡನ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ "ಭಾರತ ಮತ್ತು ಅಮೆರಿಕ ನಡುವಿನ ಸ್ನೇಹವು ಜಾಗತಿಕ ಒಳಿತಿಗಾಗಿ ಒಂದು ಶಕ್ತಿಯಾಗಿದೆ. ನಾನು ನಿಮ್ಮೊಂದಿಗಿನ ಸ್ನೇಹವನ್ನು ಸಂಪೂರ್ಣವಾಗಿ ಒಪ್ಪುತ್ತೇನೆ. ನಮ್ಮ ದೇಶಗಳ ನಡುವಿನ ಸ್ನೇಹವು ಜಾಗತಿಕ ಒಳಿತಿನ ಶಕ್ತಿಯಾಗಿದೆ. ಇದು ವಿಶ್ವವನ್ನು ಉತ್ತಮ ಮತ್ತು ಹೆಚ್ಚು ಸಮರ್ಥನೀಯವಾಗಿಸುತ್ತದೆ. ನನ್ನ ಇತ್ತೀಚಿನ ಭೇಟಿಯು ನಮ್ಮ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುತ್ತದೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

  • I fully agree with you, @POTUS @JoeBiden! Friendship between our countries is a force of global good. It will make a planet better and more sustainable. The ground covered in my recent visit will strengthen our bond even more. 🇮🇳 🇺🇸 https://t.co/iEEhBIYG17

    — Narendra Modi (@narendramodi) June 25, 2023 " class="align-text-top noRightClick twitterSection" data=" ">

ಇದನ್ನೂ ಓದಿ: ಭಾರತೀಯ ಮಕ್ಕಳು ಸ್ಪೈಡರ್​ಮ್ಯಾನ್​ ವೇಷ ಧರಿಸಿದ್ರೆ, ಅಮೆರಿಕ ಯುವಕರು ನಾಟುನಾಟು ಹಾಡಿಗೆ ಹೆಜ್ಜೆ ಹಾಕುತ್ತಾರೆ: ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಜೂನ್ 20-25 ರಿಂದ ಅಮೆರಿಕ ಮತ್ತು ಈಜಿಪ್ಟ್‌ಗೆ ತಮ್ಮ ಮೊದಲ ರಾಜ್ಯ ಪ್ರವಾಸವನ್ನು ಪ್ರಾರಂಭಿಸಿದ್ದರು. ಅವರು ಜೂ.24 ರಂದು ಅಮೆರಿಕ ಪ್ರವಾಸವನ್ನು ಕೊನೆಗೊಳಿಸಿದ್ದರು. ಬಳಿಕ ಅಲ್ಲಿಂದ ಕೈರೋಗೆ ಪ್ರಯಾಣ ಬೆಳೆಸಿದ್ದರು. ತಮ್ಮ ಅಮೆರಿಕ ಭೇಟಿಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಭಾರತೀಯ ಮತ್ತು ಅಮೆರಿಕದ ಪ್ರಮುಖ ಸಿಇಒಗಳನ್ನು ಭೇಟಿ ಮಾಡಿ ಮಹತ್ವದ ಒಪ್ಪಂದಗಳು, ಸಮಾಲೋಚನೆಯನ್ನು ಮಾಡಿದ್ದರು. ಶ್ವೇತಭವನದಲ್ಲಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು. ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡನ್ ಅವರು ಶ್ವೇತಭವನದಲ್ಲಿ ರಾಜ್ಯ ಭೋಜನಕ್ಕೆ ಆತಿಥ್ಯ ವಹಿಸಿದ್ದರು. ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಈ ಭೋಜನ ಕೂಟದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: PM Modi in Egypt: ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ ಪಿರಮಿಡ್‌ ವೀಕ್ಷಿಸಿದ ಪ್ರಧಾನಿ ಮೋದಿ - ವಿಡಿಯೋ

ಈಪ್ಟ್‌ಗೆ ಪ್ರಯಾಣಿಸುವ ಮೊದಲು ಪ್ರಧಾನಿ ಮೋದಿ ಅವರು ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ಬಿಲ್ಡಿಂಗ್‌ನಲ್ಲಿ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದರು. ಈಜಿಪ್ಟ್‌ಗೆ ಆಗಮಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ನಾಯಕರು ಮತ್ತು ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದರು. ಜನವರಿ 2023ರಲ್ಲಿ ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸಿದ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಈಜಿಪ್ಟ್‌ಗೆ ಭೇಟಿ ನೀಡಿದ್ದರು.

ಇದನ್ನೂ ಓದಿ: ಅಮೆರಿಕ, ಈಜಿಪ್ಟ್ ಪ್ರವಾಸದ ನಂತರ ಭಾರತಕ್ಕೆ ವಾಪಸ್​​ ಆದ ಪ್ರಧಾನಿ ಮೋದಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.