ಜಕಾರ್ತ (ಇಂಡೋನೇಷ್ಯಾ): ಇಲ್ಲಿನ ಇಸ್ಲಾಮಿಕ್ ಸೆಂಟರ್ ಗ್ರ್ಯಾಂಡ್ ಮಸೀದಿಯ ಅತಿದೊಡ್ಡ ಗುಮ್ಮಟದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಕುಸಿತ ಕಂಡಿದೆ. ಮಸೀದಿಯ ಗುಮ್ಮಟ ಕುಸಿದ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸ್ಥಳೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಗುಮ್ಮಟದ ನವೀಕರಣದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಗ್ನಿ ನಂದಿಸಲು ಹರಸಾಹಸಪಟ್ಟಿತು. ಕನಿಷ್ಠ ಹತ್ತು ಅಗ್ನಿಶಾಮಕ ವಾಹನಗಳನ್ನು ಘಟನಾ ಸ್ಥಳದಲ್ಲಿದ್ದು, ಬೆಂಕಿ ನಂದಿಸುವ ಕೆಲಸ ಮಾಡಿದವು ಎಂದು ಇಂಡೋನೇಷ್ಯಾ ಮಾಧ್ಯಮ ವರದಿ ಮಾಡಿದೆ.
ಮಸೀದಿಯ ಗುಮ್ಮಟ ಕುಸಿದು ಬೀಳುವ ಮುನ್ನವೇ ಜ್ವಾಲೆ ಮತ್ತು ಹೊಗೆ ಉಗುಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿವೆ. ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಆ ಸಮಯದಲ್ಲಿ ಇಸ್ಲಾಮಿಕ್ ಸೆಂಟರ್ ನವೀಕರಣಗೊಳ್ಳುತ್ತಿತ್ತು ಎಂದು ಮಾಧ್ಯಮ ವರದಿಗಳು ಸೂಚಿಸುತ್ತವೆ.
ಬೆಂಕಿ ಅಥವಾ ನಂತರದ ಕುಸಿತದಿಂದ ಯಾರಿಗೂ ಗಾಯಗಳಾಗಿಲ್ಲ. ಬೆಂಕಿಯ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಮತ್ತು ಕಟ್ಟಡದಲ್ಲಿ ಕೆಲಸ ಮಾಡುವ ಗುತ್ತಿಗೆದಾರರನ್ನು ಪ್ರಶ್ನಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮಸೀದಿಯ ಹೊರತಾಗಿ, ಇಸ್ಲಾಮಿಕ್ ಸೆಂಟರ್ ಸಂಕೀರ್ಣವು ಶೈಕ್ಷಣಿಕ, ವಾಣಿಜ್ಯ ಮತ್ತು ಸಂಶೋಧನಾ ಸೌಲಭ್ಯಗಳನ್ನು ಸಹ ಹೊಂದಿದೆ.
ಇದನ್ನು ಓದಿ:ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ಗೆ ಮತ್ತೆ ಶಾಕ್..ಗೃಹ ಸಚಿವೆ ಬಳಿಕ ಮುಖ್ಯ ಸಚೇತಕರ ರಾಜೀನಾಮೆ