ದುಬೈ: ನೈಋತ್ಯ ಇರಾನ್‌ನ ಇಝೆಹ್‌ನ ಬಜಾರ್‌ನಲ್ಲಿ ಬುಧವಾರ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಕನಿಷ್ಠ ಐವರು ಮೃತಪಟ್ಟಿದ್ದಾರೆ. ಭದ್ರತಾ ಸಿಬ್ಬಂದಿ ಸೇರಿದಂತೆ 10 ಜನರು ಗಾಯಗೊಂಡಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ದಾಳಿಗೆ ಕಾರಣವೇನು?: ಕಳೆದ ಎರಡು ತಿಂಗಳುಗಳಿಂದ ಇರಾನ್ನಲ್ಲಿ ನಡೆಯುತ್ತಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಗೂ ಇದಕ್ಕೂ ಸಂಬಂಧವಿದೆಯೇ ಎಂಬುದು ಸ್ಪಷ್ಟವಾಗಿಲ್ಲ
ಇದನ್ನೂ ಓದಿ: ಇರಾನ್‌ನ ಹಿಜಾಬ್ ವಿರೋಧಿ ಪ್ರತಿಭಟನೆಗೆ ಕೋಯಿಕ್ಕೋಡ್ನಲ್ಲಿ ಸಾತ್..
ಹಲವಾರು ಪ್ರತಿಭಟನಾಕಾರರು ಬುಧವಾರ ತಡರಾತ್ರಿ ಇಝೆಹ್‌ನ ವಿವಿಧ ಭಾಗಗಳಲ್ಲಿ ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಪೊಲೀಸರ ಮೇಲೆ ಕಲ್ಲುಗಳನ್ನೂ ಎಸೆದಿದ್ದಾರೆ. ಪೊಲೀಸರು ಗುಂಪು ಚದುರಿಸಲು ಅಶ್ರುವಾಯು ಪ್ರಯೋಗಿಸಿದ್ದಾರೆ ಎಂದು ತಿಳಿದುಬಂದಿದೆ.