ನವದೆಹಲಿ: ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್ ಕಚೇರಿಗೆ ಖಲಿಸ್ತಾನಿ ಬೆಂಬಲಿಗರು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಇದನ್ನು ಅಮೆರಿಕ ತೀವ್ರವಾಗಿ ಖಂಡಿಸಿದೆ. ಮಧ್ಯರಾತ್ರಿ ಕಚೇರಿಗೆ ನುಗ್ಗಿದ ಖಲಿಸ್ತಾನಿಗಳು ಬೆಂಕಿ ಹಚ್ಚಿದ್ದಾರೆ. ಇದರ ವಿಡಿಯೋ ಸಹ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಜ್ವಾಲೆ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಿಬ್ಬಂದಿಗೆ ಗಾಯವಾಗಿಲ್ಲ. ಇದು ಕಳೆದ 5 ತಿಂಗಳಲ್ಲಿ ನಡೆದ ಎರಡನೇ ಘಟನೆ. ಈ ಹಿಂದೆಯೂ ಕಟ್ಟಡಕ್ಕೆ ನುಗ್ಗಿದ್ದ ಖಲಿಸ್ತಾನಿಗಳು ಧ್ವಂಸ ಮಾಡಿ ದಾಂಧಲೆ ಎಬ್ಬಿಸಿದ್ದರು.
-
ARSON ATTEMPT AT SF INDIAN CONSULATE: #DiyaTV has verified with @CGISFO @NagenTV that a fire was set early Sunday morning between 1:30-2:30 am in the San Francisco Indian Consulate. The fire was suppressed quickly by the San Francisco Department, damage was limited and no… pic.twitter.com/bHXNPmqSVm
— Diya TV - 24/7 * Free * Local (@DiyaTV) July 3, 2023 " class="align-text-top noRightClick twitterSection" data="
">ARSON ATTEMPT AT SF INDIAN CONSULATE: #DiyaTV has verified with @CGISFO @NagenTV that a fire was set early Sunday morning between 1:30-2:30 am in the San Francisco Indian Consulate. The fire was suppressed quickly by the San Francisco Department, damage was limited and no… pic.twitter.com/bHXNPmqSVm
— Diya TV - 24/7 * Free * Local (@DiyaTV) July 3, 2023ARSON ATTEMPT AT SF INDIAN CONSULATE: #DiyaTV has verified with @CGISFO @NagenTV that a fire was set early Sunday morning between 1:30-2:30 am in the San Francisco Indian Consulate. The fire was suppressed quickly by the San Francisco Department, damage was limited and no… pic.twitter.com/bHXNPmqSVm
— Diya TV - 24/7 * Free * Local (@DiyaTV) July 3, 2023
ಎಚ್ಚರಿಕೆ ನೀಡಿದ್ದ ಸಿಖ್ ಸಂಘ: ಇದಕ್ಕೂ ಮೊದಲು ಖಲಿಸ್ತಾನಿ ಹೋರಾಟಗಾರರ ಸಂಘವಾದ ಸಿಖ್ ಫಾರ್ ಜಸ್ಟೀಸ್ನ ಗುರುಪತ್ವಂತ್ ಸಿಂಗ್ ಪನ್ನು ಎಂಬಾತ ಈ ಹಿಂದೆಯೇ ಭಾರತೀಯ ಕಾನ್ಸುಲೇಟ್ ಕಚೇರಿಗೆ ಬೆಂಕಿ ಹಚ್ಚಲಾಗುವುದು ಎಂದು ಜೂನ್ 30ರಂದು ಬೆದರಿಕೆ ಸಂದೇಶ ಕಳುಹಿಸಿದ್ದ.ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದೂ ಹೇಳಿದ್ದ. ಅದರಂತೆ ಘೋಷಿಸಿದ ಮರುದಿನವೇ ಅಂದರೆ, ಜುಲೈ 1ರಂದು ಮಧ್ಯರಾತ್ರಿ ಬೆಂಕಿ ಹಚ್ಚಿದ್ದಾರೆ.
ಬೆಂಕಿ ಹಚ್ಚಿದ ವಿಡಿಯೋ ಬಿಡುಗಡೆ: ಖಲಿಸ್ತಾನಿ ಬೆಂಬಲಿಗರು ಬೆಂಕಿ ಹಚ್ಚಿದ ವಿಡಿಯೋವನ್ನೂ ಬಿಡುಗಡೆ ಮಾಡಿದ್ದಾರೆ. ಕಳೆದ ತಿಂಗಳು ಕೆನಡಾದಲ್ಲಿ ಹತ್ಯೆಗೀಡಾದ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜಾರ್ ಹತ್ಯೆಗೆ ಸೇಡು ತೀರಿಸಿಕೊಳ್ಳುವುದಾಗಿ ವಿಡಿಯೋದಲ್ಲಿ ಹೇಳಲಾಗಿದೆ. ಕೆನಡಾದ ಸರ್ರೆಯಲ್ಲಿರುವ ಗುರುನಾನಕ್ ಗುರುದ್ವಾರದ ಹೊರಗೆ ಇಬ್ಬರು ಅಪರಿಚಿತ ಯುವಕರು ಖಲಿಸ್ತಾನಿ ಉಗ್ರ ನಿಜಾರ್‌ನನ್ನು ಗುಂಡಿಕ್ಕಿ ಕೊಂದಿದ್ದರು.
ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ವಿಡಿಯೋ ಬಿಡುಗಡೆ ಮಾಡಿ, ಜುಲೈ 8ರಂದು ಕೆನಡಾ, ಅಮೆರಿಕ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಯುರೋಪ್ ದೇಶಗಳಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳ ಹೊರಗೆ ತೀವ್ರ ಹೋರಾಟ ನಡೆಸಲಾಗುವುದು. ಅಷ್ಟೇ ಅಲ್ಲದೇ, ಈ ಹೋರಾಟಕ್ಕೆ ‘ಕಿಲ್ ಇಂಡಿಯಾ’ ಎಂದು ಹೆಸರಿಡಲಾಗಿದೆ. ಭಾರತೀಯ ರಾಯಭಾರಿ ಕಚೇರಿಗಳ ಹೊರಗೆ ಪ್ರತಿಭಟನೆ ಮತ್ತು ತ್ರಿವರ್ಣ ಧ್ವಜವನ್ನು ಅವಮಾನಿಸುವುದು ಉದ್ದೇಶವಾಗಿತ್ತು. ಬೆದರಿಕೆ ಬೆನ್ನಲ್ಲೇ ಭಾರತೀಯ ತನಿಖಾ ಸಂಸ್ಥೆಗಳು ಅಲರ್ಟ್ ಆಗಿದ್ದವು.
-
The U.S. strongly condemns the reported vandalism and attempted arson against the Indian Consulate in San Francisco on Saturday. Vandalism or violence against diplomatic facilities or foreign diplomats in the U.S. is a criminal offense.
— Matthew Miller (@StateDeptSpox) July 3, 2023 " class="align-text-top noRightClick twitterSection" data="
">The U.S. strongly condemns the reported vandalism and attempted arson against the Indian Consulate in San Francisco on Saturday. Vandalism or violence against diplomatic facilities or foreign diplomats in the U.S. is a criminal offense.
— Matthew Miller (@StateDeptSpox) July 3, 2023The U.S. strongly condemns the reported vandalism and attempted arson against the Indian Consulate in San Francisco on Saturday. Vandalism or violence against diplomatic facilities or foreign diplomats in the U.S. is a criminal offense.
— Matthew Miller (@StateDeptSpox) July 3, 2023
ಅಮೆರಿಕ ಖಂಡನೆ: ಕಾನ್ಸುಲೇಟ್ ಕಚೇರಿಗೆ ಬೆಂಕಿ ಹಚ್ಚಿದ ಘಟನೆಯನ್ನು ಅಮೆರಿಕ ಖಂಡಿಸಿದೆ. ಅಮೆರಿಕ ಸರ್ಕಾರದ ವಕ್ತಾರ ಮ್ಯಾಥ್ಯೂ ಮಿಲ್ಲರ್ ಮಂಗಳವಾರ ಟ್ವೀಟ್ ಮಾಡಿದ್ದು, 'ಘಟನೆಯ ಬಗ್ಗೆ ಫೆಡರಲ್ ಬ್ಯೂರೋ ಮೂಲಕ ತನಿಖೆ ನಡೆಸಲಾಗುತ್ತಿದೆ' ಎಂದು ತಿಳಿಸಿದ್ದಾರೆ. 5 ತಿಂಗಳಲ್ಲಿ ಇದು ಎರಡನೇ ಘಟನೆಯಾಗಿದೆ. ಅಮೃತಪಾಲ್ ಬಿಡುಗಡೆಗೆ ಒತ್ತಾಯಿಸಿ ಖಲಿಸ್ತಾನ್ ಬೆಂಬಲಿಗರು ಮಾರ್ಚ್‌ನಲ್ಲಿ ಕಾನ್ಸುಲೇಟ್ ಕಚೇರಿಗೆ ಮುತ್ತಿಗೆ ಹಾಕಿದ್ದರು. ಇದಾದ ಬಳಿಕ ಕಚೇರಿಗೆ ಭದ್ರತೆ ನೀಡಲಾಗುವುದು ಎಂದು ಅಭಯ ನೀಡಿತ್ತು.
ಇದನ್ನೂ ಓದಿ: Balasore train tragedy: ಬಾಲಸೋರ್ ತ್ರಿವಳಿ ರೈಲು ದುರಂತಕ್ಕೆ 'ಮಾನವ ಲೋಪ'ವೇ ಕಾರಣ!- ತನಿಖಾ ವರದಿ