ETV Bharat / international

'ಇದು ಯುದ್ಧದ ಸಮಯವಲ್ಲವೆಂದು ಮೋದಿ ಸರಿಯಾಗಿಯೇ ಹೇಳಿದ್ದಾರೆ': ಫ್ರಾನ್ಸ್​ ಅಧ್ಯಕ್ಷ

ಇದು ಯುದ್ಧದ ಸಮಯವಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಸರಿಯಾಗಿಯೇ ಹೇಳಿದ್ದಾರೆ ಎಂದು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಭಾಷಣದಲ್ಲಿ ಹೇಳಿದರು. ನಮ್ಮ ಮುಂದಿರುವ ಸವಾಲುಗಳನ್ನು ಒಗ್ಗಟ್ಟಿನಿಂದ ಎದುರಿಸಬೇಕು ಎಂದು ಅವರು ಜಾಗತಿಕ ನಾಯಕರಿಗೆ ಸಲಹೆ ನೀಡಿದ್ದಾರೆ.

French President Emmanuel Macron
French President Emmanuel Macron
author img

By

Published : Sep 21, 2022, 7:29 AM IST

ನ್ಯೂಯಾರ್ಕ್​​(ಅಮೆರಿಕ): ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 77ನೇ ಅಧಿವೇಶನದಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಫ್ರಾನ್ಸ್​ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್​, "ಇದು ಯುದ್ಧದ ಸಮಯವಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ" ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಕಳೆದ ಕೆಲವೇ ದಿನಗಳ ಹಿಂದೆ ಉಜ್ಬೇಕಿಸ್ತಾನದ ಸಮರ್‌ಖಂಡ್​​ನಲ್ಲಿ ಆಯೋಜಿಸಿದ್ದ ಎರಡು ದಿನಗಳ ಶಾಂಘೈ ಸಹಕಾರ ಸಂಘಟನೆಯ(ಎಸ್‌ಸಿಒ) ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದ ಅವರು, "ಇದು ಯುದ್ಧದ ಸಮಯವಲ್ಲ. ಉಕ್ರೇನ್ ಜೊತೆಗಿನ ಸಂಘರ್ಷ ಕೊನೆಗೊಳಿಸಿ" ಎಂದು ಕಿವಿಮಾತು ಹೇಳಿದ್ದರು. ಇದಕ್ಕೆ ಅಮೆರಿಕ ಸೇರಿದಂತೆ ಜಾಗತಿದ ಮಾಧ್ಯಮಗಳು ಮೆಚ್ಚುಗೆ ಸೂಚಿಸಿದ್ದವು.

  • New York, USA | Indian PM Modi was right when he said that time is not for war, not for revenge against the west or for opposing the west against east. It is time for our sovereign equal states to cope together with challenges we face: French President Emmanuel Macron at #UNGA pic.twitter.com/HJBZJELhEF

    — ANI (@ANI) September 20, 2022 " class="align-text-top noRightClick twitterSection" data=" ">

ಇದನ್ನೂ ಓದಿ: 'ಇದು ಯುದ್ಧದ ಸಮಯವಲ್ಲ'.. ಪುಟಿನ್​ಗೆ ತಿಳಿಹೇಳಿದ ಮೋದಿಗೆ ಯುಎಸ್​ ಮಾಧ್ಯಮಗಳು ಬಹುಪರಾಕ್​

"ಇದು ಪಶ್ಚಿಮದ ದೇಶಗಳ ವಿರುದ್ಧ ಸೇಡು ತೀರಿಸಿಕೊಳ್ಳುವ ಅಥವಾ ಪೂರ್ವದ ದೇಶಗಳ ವಿರುದ್ಧ ಪಶ್ಚಿಮವನ್ನು ಎತ್ತಿಕಟ್ಟುವ ಸಮಯವಲ್ಲ. ತಮ್ಮ ಮುಂದಿರುವ ಜಾಗತಿಕ ಸವಾಲುಗಳನ್ನು ಎಲ್ಲ ರಾಷ್ಟ್ರಗಳೂ ಒಗ್ಗಟ್ಟಿನಿಂದ ಎದುರಿಸಬೇಕು. ಶಾಂತಿಯುತ ಮಾತುಕತೆಯಿಂದ ಸಕಲ ರೀತಿಯ ಪ್ರಗತಿಯೂ ಸಾಧ್ಯ" ಎಂದು ಅವರು ಅಭಿಪ್ರಾಯಪಟ್ಟರು.

ಆಹಾರ, ಇಂಧನ ಭದ್ರತೆ ಮತ್ತು ರೈತರಿಗೆ ರಸಗೊಬ್ಬರಗಳ ಸಮಸ್ಯೆಗಳನ್ನು ಪರಿಹರಿಸಲು ನಾವು ಉಪಯುಕ್ತ ಮಾರ್ಗಗಳನ್ನು ಕಂಡುಕೊಳ್ಳಬೇಕು. ಉಕ್ರೇನ್‌ನಿಂದ ನಮ್ಮ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ನಮಗೆ ಸಹಾಯ ಮಾಡಿದ ರಷ್ಯಾ ಮತ್ತು ಉಕ್ರೇನ್‌ಗೆ ಇದೇ ಸಂದರ್ಭದಲ್ಲಿ ಮ್ಯಾಕ್ರೋನ್ ಧನ್ಯವಾದ ಅರ್ಪಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.