ETV Bharat / international

ಎಲ್ ಸಾಲ್ವಡೋರ್‌ ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಕಾಲ್ತುಳಿತ: 9 ಮಂದಿ ಸಾವು - ಎಲ್ ಸಾಲ್ವಡೋರ್‌ ಫುಟ್ ಬಾಲ್ ಕ್ರೀಡಾಂಗಣ

ಅಲಿಯಾಂಜಾ ಮತ್ತು ಎಫ್‌ಎಎಸ್ ತಂಡಗಳ ನಡುವಿನ ಪಂದ್ಯ ವೀಕ್ಷಿಸಲು ರಾಜಧಾನಿ ಸ್ಯಾನ್ ಸಾಲ್ವಡೋರ್​​ನ ಕ್ರೀಡಾಂಗಣದ ಬಳಿ ಸಾಕಷ್ಟು ಜನರು ಸೇರಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ.

stampede at soccer stadium
ಫುಟ್ ಬಾಲ್ ಕ್ರೀಡಾಂಗಣದಲ್ಲಿ ಕಾಲ್ತುಳಿತ
author img

By

Published : May 21, 2023, 12:50 PM IST

ಸ್ಯಾನ್ ಸಾಲ್ವಡೋರ್: ಎಲ್ ಸಾಲ್ವಡೋರ್​ ದೇಶದ ರಾಜಧಾನಿ ಸ್ಯಾನ್ ಸಾಲ್ವಡೋರ್​​ನಲ್ಲಿರುವ ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಗೇಟ್‌ಗಳನ್ನು ಮುಚ್ಚಿದ ನಂತರ ಸ್ಥಳೀಯ ತಂಡ ಅಲಿಯಾಂಜಾ ಮತ್ತು ಎಫ್‌ಎಎಸ್ ನಡುವಿನ ಪಂದ್ಯವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣಕ್ಕೆ ಪ್ರವೇಶಿಸಲು ಪ್ರಯತ್ನಿಸಿದಾಗ ಕಾಲ್ತುಳಿತ ನಡೆದಿದೆ. ಈ ಘಟನೆಯಲ್ಲಿ 18 ವರ್ಷ ಮೇಲ್ಪಟ್ಟ 7 ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಬಿಬಿಸಿ ಸುದ್ದಿ ವಾಹಿನಿ ವರದಿ ಮಾಡಿದೆ.

ಸ್ಥಳೀಯ ಮಾಧ್ಯಮಗಳು ಹಂಚಿಕೊಂಡ ತುಣುಕಿನಲ್ಲಿ, ಅಭಿಮಾನಿಗಳು ಕ್ರೀಡಾಂಗಣದ ಪ್ರವೇಶದ್ವಾರದ ಮೇಲೆ ಬ್ಯಾರಿಕೇಡ್‌ಗಳನ್ನು ಎಳೆಯಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಎಲ್ ಸಾಲ್ವಡೋರ್​‌ನ ಆರೋಗ್ಯ ಸಚಿವ ಫ್ರಾನ್ಸಿಸ್ಕೊ ​​ಅಲಾಬಿ ಅವರು ಆ್ಯಂಬುಲೆನ್ಸ್‌ಗಳ ಮೂಲಕ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಹಲವು ಗಾಯಗೊಂಡಿದ್ದು, ಈ ಪೈಕಿ ಹಲವ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಚಿತ್ತಿರೈ ಉತ್ಸವದಲ್ಲಿ ಕಾಲ್ತುಳಿತ: ಇತ್ತೀಚೆಗೆ ತಮಿಳುನಾಡಿನ ಮಧುರೈ ನಗರದ ಕಲ್ಲಜಗರ್ ದೇವರ ವೈಗೈ ನದಿಗೆ ಪ್ರವೇಶಿಸುವ ಚಿತಿರೈ ಉತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಐವರು ಸಾವನ್ನಪ್ಪಿದ್ದರು.

ಇದನ್ನೂ ಓದಿ: ಮಧುರೈ ಕಲ್ಲಜಗರ್ ದೇವರ ಚಿತ್ತಿರೈ ಉತ್ಸವದಲ್ಲಿ ಕಾಲ್ತುಳಿತ: ಐವರ ಸಾವು

78 ಮಂದಿ ಸಾವು: ಯೆಮೆನ್​​ನ ಶಾಲೆಯೊಂದರಲ್ಲಿ ಹಣಕಾಸಿನ ನೆರವು ವಿತರಿಸುವ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಏಕಕಾಲಕ್ಕೆ ನುಗ್ಗಿದ್ದರಿಂದ ನಡೆದ ಕಾಲ್ತುಳಿತದಲ್ಲಿ ಕನಿಷ್ಠ 78 ಮಂದಿ ಸಾವನ್ನಪ್ಪಿ, ನೂರಾರು ಮಂದಿ ಗಾಯಗೊಂಡಿರುವ ದುರ್ಘಟನೆ ಇತ್ತೀಚೆಗೆ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಬಂಡುಕೋರರ ಗುಂಪು ರಾಜಧಾನಿಯಲ್ಲಿ ಹಣಕಾಸಿನ ನೆರವು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಇದನ್ನರಿತ ಜನರು ಸಾಗರೋಪಾದಿಯಲ್ಲಿ ಮುತ್ತಿಗೆ ಹಾಕಿದರು. ಭಾರಿ ಸಮೂಹ ಸೇರಿದ್ದರಿಂದ ತಡೆಯುವಲ್ಲಿ ಆಯೋಜಕರು ವಿಫಲರಾಗಿದ್ದರು. ಜನರ ತಿಕ್ಕಾಟ ಹೆಚ್ಚಾಗಿ ನೆರವು ಪಡೆಯಲು ನಾಮುಂದು ತಾಮುಂದು ಎಂದು ಬಂದಿದ್ದರಿಂದ ಕಾಲ್ತುಳಿತ ಉಂಟಾಗಿತ್ತು.

ಇದನ್ನೂ ಓದಿ: ಯೆಮೆನ್​ನಲ್ಲಿ ಹಣಕಾಸಿನ ನೆರವು ವಿತರಣೆ ಕಾರ್ಯಕ್ರಮದಲ್ಲಿ ಕಾಲ್ತುಳಿತ: 78 ಮಂದಿ ಸಾವು

ಕಾಲ್ತುಳಿತಕ್ಕೆ 11 ಜನ ಸಾವು: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಜಿಲ್ಲೆಗಳಲ್ಲಿ ಇತ್ತೀಚೆಗೆ ಉಚಿತ ಗೋಧಿ ಹಿಟ್ಟು ವಿತರಿಸುವ ಕೇಂದ್ರಗಳಲ್ಲಿ ಕಾಲ್ತುಳಿತ ಉಂಟಾಗಿ ಹಲವರು ಅಸುನೀಗಿದ್ದರು. ಪಂಜಾಬ್ ಪ್ರಾಂತ್ಯದ ಸರ್ಕಾರಿ ವಿತರಣಾ ಕೇಂದ್ರಗಳಿಂದ ಉಚಿತ ಹಿಟ್ಟು ಪಡೆಯಲು ಪ್ರಯತ್ನಿಸುತ್ತಿರುವಾಗ ನೂಕಾಟ ತಳ್ಳಾಟ ನಡೆದಿದ್ದು, ಮಹಿಳೆಯರು ಸೇರಿದಂತೆ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಉಚಿತ ಗೋಧಿ ಹಿಟ್ಟು ಪಡೆಯಲು ನೂಕುನುಗ್ಗಲು; ಕಾಲ್ತುಳಿತಕ್ಕೆ 11 ಜನ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.