ETV Bharat / international

ಶಿಕ್ಷಣವಿಲ್ಲ, ಕೆಲಸವೂ ಇಲ್ಲ..: ತಾಲಿಬಾನ್ ಆಡಳಿತದಲ್ಲಿ ಮಹಿಳೆಯರ ಸ್ಥಿತಿ ಶೋಚನೀಯ!

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದಲ್ಲಿ ಮಹಿಳೆಯರ ಸ್ಥಿತಿ ದಿನದಿಂದ ದಿನಕ್ಕೆ ಶೋಚನೀಯವಾಗುತ್ತಿದೆ. ಶಿಕ್ಷಣ ಹಾಗೂ ಕೆಲಸ ಎರಡರಿಂದಲೂ ವಂಚಿತವಾಗಿರುವ ಮಹಿಳೆಯರ ಜೀವನ ದುರ್ಭರವಾಗಿದೆ.

Women in Afghanistan face financial hardships after being barred from work

author img

By

Published : Mar 31, 2023, 12:41 PM IST

ಕಾಬೂಲ್ (ಅಫ್ಘಾನಿಸ್ತಾನ) : ತಾಲಿಬಾನ್​ನ ಕಠಿಣ ಇಸ್ಲಾಮಿಕ್ ಆಡಳಿತದಲ್ಲಿ ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಹೊರಗೆ ಹೋಗಿ ಕೆಲಸ ಮಾಡುವುದನ್ನು ನಿಷೇಧಿಸಲಾಗಿದೆ. ಇದರಿಂದ ಅಪ್ಘನ್ ಮಹಿಳೆಯರು ತೀವ್ರ ಆರ್ಥಿಕ ಮುಗ್ಗಟ್ಟಿನಿಂದ ನರಳುವಂತಾಗಿದೆ. ತಾಲಿಬಾನ್ ಆಡಳಿತದಲ್ಲಿ ದೇಶದಲ್ಲಿ ಮಹಿಳೆಯರ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಕೆಲಸವಿಲ್ಲದೆ ನಿರುದ್ಯೋಗಿಗಳಾಗಿರುವ ಸಾವಿರಾರು ಮಹಿಳೆಯರು ಆರ್ಥಿಕ ಹಾಗೂ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ. ತಾಲಿಬಾನ್​ನ ಇಸ್ಲಾಮಿಕ್ ಆಡಳಿತವನ್ನು ಪ್ರಬಲವಾಗಿ ವಿರೋಧಿಸಿರುವ ಮಹಿಳೆಯರು ತಮ್ಮ ಆರ್ಥಿಕ ಮುಗ್ಗಟ್ಟಿಗೆ ಕೊನೆಗಾಣಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ದೇಶದ ಆರ್ಥಿಕ ಏಳಿಗೆಗಾಗಿ ಮಹಿಳೆ ಮತ್ತು ಪುರುಷರಿಬ್ಬರಿಗೂ ಕೆಲಸ ಮಾಡುವ ಅವಕಾಶ ನೀಡಬೇಕೆಂದು ಕಾಬೂಲ್ ಜನತೆ ತಾಲಿಬಾನ್​ಗೆ ಒತ್ತಾಯಿಸುತ್ತಿದ್ದಾರೆ. ಶಿಕ್ಷಣದ ಮೇಲಿನ ನಿಷೇಧ, ಅಫ್ಘಾನ್ ಹುಡುಗಿಯರು ಮತ್ತು ಮಹಿಳೆಯರಿಗೆ ಕೆಲಸದ ನಿಷೇಧಗಳಿಂದ ದೇಶದಲ್ಲಿ ಬಾಲ್ಯ ವಿವಾಹ, ಹಿಂಸೆಗಳು ಹೆಚ್ಚಾಗುತ್ತಿವೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಮಹಿಳೆಯರು ಮತ್ತು ಬಾಲಕಿಯರಿಗೆ ಶಿಕ್ಷಣ ಹಾಗೂ ಕೆಲಸದ ಮೇಲೆ ನಿಷೇಧ ವಿಧಿಸಿರುವುದು ಇಸ್ಲಾಮಿಕ್ ಕಾನೂನಿನ ಉಲ್ಲಂಘನೆ ಎಂದು ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ಸೇರಿದಂತೆ ವಿಶ್ವದ ಹಲವು ಇಸ್ಲಾಮಿಕ್ ರಾಷ್ಟ್ರಗಳು ಮತ್ತು ಸಂಸ್ಥೆಗಳು ಖಂಡಿಸಿವೆ. ಆಗಸ್ಟ್ 15, 2021 ರಿಂದ ತಾಲಿಬಾನ್ ಆಡಳಿತದ ಅಧಿಕಾರಿಗಳು ಬಾಲಕಿಯರು ಮಾಧ್ಯಮಿಕ ಶಾಲೆಗೆ ಹೋಗುವುದನ್ನು ನಿರ್ಬಂಧಿಸಿದ್ದಾರೆ. ದೇಶದಲ್ಲಿ ಮಹಿಳೆಯರು ಮತ್ತು ಯುವತಿಯರ ಚಲನೆಯ ಸ್ವಾತಂತ್ರ್ಯವನ್ನು ನಿರ್ಬಂಧಿಸಲಾಗಿದೆ. ಮಹಿಳೆಯರು ಉದ್ಯಾನ ವನಗಳು, ಜಿಮ್‌ಗಳು ಮತ್ತು ಸಾರ್ವಜನಿಕ ಸ್ನಾನ ಗೃಹಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ.

ಅಮೆರಿಕ ಅಫ್ಘಾನಿಸ್ತಾನದಲ್ಲಿ ಬಿಟ್ಟುಹೋದ ಶಸ್ತ್ರಾಸ್ತ್ರಗಳಿಂದ ಜಗತ್ತಿಗೆ ಅಪಾಯ: 2021 ರಲ್ಲಿ ಅಮೆರಿಕವು ಅಫ್ಘಾನಿಸ್ತಾನದಿಂದ ತನ್ನ ಪಡೆಗಳನ್ನು ಹಿಂತೆಗೆದುಕೊಂಡ ಸಮಯದಲ್ಲಿ, ತಾನು ಬಳಸುತ್ತಿದ್ದ ಬಂದೂಕುಗಳು, ಸಂವಹನ ಸಾಧನಗಳು ಮತ್ತು ಶಸ್ತ್ರಸಜ್ಜಿತ ವಾಹನಗಳು ಸೇರಿದಂತೆ ಸುಮಾರು 7 ಶತಕೋಟಿ ಡಾಲರ್ ಮೌಲ್ಯದ ಮಿಲಿಟರಿ ಉಪಕರಣಗಳು ಮತ್ತು ಶಸ್ತ್ರಾಸ್ತ್ರಗಳನ್ನು ಅಫ್ಘಾನಿಸ್ತಾನದಲ್ಲಿಯೇ ಬಿಟ್ಟು ಹೋಗಿತ್ತು. ಇದರ ನಂತರ ಪಾಶ್ಚಿಮಾತ್ಯ ರಾಷ್ಟ್ರಗಳಿಂದ ಬೆಂಬಲಿತವಾದ ಅಪ್ಘನ್ ಸರ್ಕಾರ ಪತನವಾಗಿ ತಾಲಿಬಾನ್ ಅಧಿಕಾರಕ್ಕೆ ಬಂದಿತ್ತು. ಸದ್ಯ ಅಮೆರಿಕ ಬಿಟ್ಟು ಹೋದ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರಗಳು ತಾಲಿಬಾನ್ ಕೈಗೆ ಸಿಕ್ಕಿದ್ದು ಜಗತ್ತಿಗೆ ಅಪಾಯ ಎದುರಾಗಬಹುದು ಎಂದು ವಿಶ್ಲೇಷಕರು ಹೇಳಿದ್ದಾರೆ.

ಅಮೆರಿಕದ ಶಸ್ತ್ರಾಸ್ತ್ರಗಳನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ, ಇದರಲ್ಲಿ ಕೆಲ ಅಪಾಯಕಾರಿ ಶಸ್ತ್ರಾಸ್ತ್ರಗಳು ನೆರೆಯ ಪಾಕಿಸ್ತಾನದಲ್ಲಿ ಕಾಣಿಸಿಕೊಂಡಿವೆ. ಪಾಕಿಸ್ತಾನದಲ್ಲಿ ಸಕ್ರಿಯವಾಗಿರುವ ಕೆಲ ಮೂಲಭೂತವಾದಿ ಸಶಸ್ತ್ರ ಗುಂಪುಗಳ ಕೈಗೆ ಇವು ಸಿಕ್ಕಿವೆ ಎಂದು ವಿಶ್ವಾಸಾರ್ಹ ಮೂಲಗಳು ಹೇಳಿವೆ. ಯುಎಸ್ ಶಸ್ತ್ರಾಸ್ತ್ರಗಳ ಲಭ್ಯತೆಯಿಂದ ತೆಹ್ರಿಕ್-ಇ ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಉಗ್ರಗಾಮಿ ಗುಂಪು ಮತ್ತು ಪಾಕಿಸ್ತಾನದಲ್ಲಿ ಸರ್ಕಾರದ ವಿರುದ್ಧ ದಂಗೆಗಳನ್ನು ನಡೆಸುತ್ತಿರುವ ಜನಾಂಗೀಯ ಬಲೂಚ್ ಪ್ರತ್ಯೇಕತಾವಾದಿ ಗುಂಪುಗಳ ಮಿಲಿಟರಿ ಸಾಮರ್ಥ್ಯ ಹೆಚ್ಚಳವಾಗಿದೆ ಎಂದು ವೀಕ್ಷಕರು ಹೇಳಿದ್ದಾರೆ. ಇದು ಕಳೆದ ಎರಡು ವರ್ಷಗಳಿಂದ ಪಾಕಿಸ್ತಾನದಲ್ಲಿ ಹಿಂಸಾಚಾರ ಉಲ್ಬಣಿಸಲು ಕಾರಣವಾಗಿದೆ.

ಇದನ್ನೂ ಓದಿ: ಮುಖ್ಯ ನ್ಯಾಯಮೂರ್ತಿಗಳ ಅಧಿಕಾರಕ್ಕೆ ಕತ್ತರಿ ಹಾಕಿದ ಪಾಕಿಸ್ತಾನ ಸರ್ಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.