ಸ್ಟಾಕ್‌ಹೋಮ್ (ಸ್ವೀಡನ್): 2022ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಬೆಲಾರಸ್‌ನ ಮಾನವ ಹಕ್ಕುಗಳ ವಕೀಲ ಅಲೆಸ್ ಬಿಲಿಯಾಟ್ಸ್ಕಿ ಮತ್ತು ರಷ್ಯಾ ಹಾಗೂ ಉಕ್ರೇನ್ನ ಸಂಸ್ಥೆಗೆ ನೀಡಲಾಗಿದೆ.
ಅಲೆಸ್ ಬಿಲಿಯಾಟ್ಸ್ಕಿ ಅವರೊಂದಿಗೆ ರಷ್ಯಾದ ಮಾನವ ಹಕ್ಕುಗಳ ಸಂಸ್ಥೆ ಸ್ಮಾರಕ ಮತ್ತು ಉಕ್ರೇನಿಯನ್ ಮಾನವ ಹಕ್ಕುಗಳ ಸಂಸ್ಥೆಯು ನೊಬೆಲ್ ಪ್ರಶಸ್ತಿಗೆ ಪಾತ್ರವಾಗಿದೆ. ಯುದ್ಧಾಪರಾಧಗಳು, ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಧಿಕಾರದ ದುರುಪಯೋಗವನ್ನು ದಾಖಲಿಸುವಲ್ಲಿ ಅತ್ಯುತ್ತಮ ಪ್ರಯತ್ನವನ್ನು ಪ್ರಶಸ್ತಿ ವಿಜೇತರು ಮಾಡುತ್ತಿದ್ದಾರೆ ಎಂದು ನೊಬೆಲ್ ಸಮಿತಿ ತಿಳಿಸಿದೆ.
-
BREAKING NEWS:
— The Nobel Prize (@NobelPrize) October 7, 2022 " class="align-text-top noRightClick twitterSection" data="
The Norwegian Nobel Committee has decided to award the 2022 #NobelPeacePrize to human rights advocate Ales Bialiatski from Belarus, the Russian human rights organisation Memorial and the Ukrainian human rights organisation Center for Civil Liberties. #NobelPrize pic.twitter.com/9YBdkJpDLU
">BREAKING NEWS:
— The Nobel Prize (@NobelPrize) October 7, 2022
The Norwegian Nobel Committee has decided to award the 2022 #NobelPeacePrize to human rights advocate Ales Bialiatski from Belarus, the Russian human rights organisation Memorial and the Ukrainian human rights organisation Center for Civil Liberties. #NobelPrize pic.twitter.com/9YBdkJpDLUBREAKING NEWS:
— The Nobel Prize (@NobelPrize) October 7, 2022
The Norwegian Nobel Committee has decided to award the 2022 #NobelPeacePrize to human rights advocate Ales Bialiatski from Belarus, the Russian human rights organisation Memorial and the Ukrainian human rights organisation Center for Civil Liberties. #NobelPrize pic.twitter.com/9YBdkJpDLU
ಇದನ್ನೂ ಓದಿ: ಫ್ರೆಂಚ್ ಲೇಖಕಿ ಅನ್ನಿ ಎರ್ನಾಕ್ಸ್ ಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ
ಜೊತೆಗೆ ಶಾಂತಿ ಮತ್ತು ಪ್ರಜಾಪ್ರಭುತ್ವಕ್ಕಾಗಿ ನಾಗರಿಕ ಸಮಾಜದ ಮಹತ್ವವನ್ನು ಪ್ರದರ್ಶಿಸುತ್ತಾರೆ. ಅನೇಕ ವರ್ಷಗಳಿಂದ ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಟೀಕಿಸುವ ಅಧಿಕಾರ ಮತ್ತು ನಾಗರಿಕರ ಮೂಲ ಹಕ್ಕುಗಳನ್ನು ರಕ್ಷಿಸುವ ಹಕ್ಕನ್ನು ಉತ್ತೇಜಿಸಿದ್ದಾರೆ ಎಂದು ನೊಬೆಲ್ ಸಮಿತಿ ಹೇಳಿದೆ.
ಇದನ್ನೂ ಓದಿ: ನೊಬೆಲ್ ಪ್ರಶಸ್ತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಕುತೂಹಲಕಾರಿ ಮಾಹಿತಿ