ಅಬುಜಾ (ನೈಜೀರಿಯಾ): ನೈಜೀರಿಯಾದ ದಕ್ಷಿಣ ರಾಜ್ಯ ಇಮೊದಲ್ಲಿ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ ಸಂಭವಿಸಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮತ್ತು ಸ್ಥಳೀಯ ಮೂಲಗಳು ತಿಳಿಸಿವೆ.
ದಕ್ಷಿಣ ರಾಜ್ಯವಾದ ಇಮೊ ಗಡಿ ಪ್ರದೇಶವಾದ ಎಗ್ಬೆಮಾ ಸ್ಥಳೀಯ ಸರ್ಕಾರಿ ಪ್ರದೇಶದಲ್ಲಿನ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಶುಕ್ರವಾರ ತಡರಾತ್ರಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಈವರೆಗೆ ಈ ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಕ್ರಮ ಬಂಕರ್ ಸೈಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. 100ಕ್ಕೂ ಹೆಚ್ಚು ಜನರು ಗುರುತಿಸಲಾಗದಷ್ಟು ಸುಟ್ಟು ಹೋಗಿದ್ದಾರೆ ಎಂದು ಇಮೊದಲ್ಲಿನ ಪೆಟ್ರೋಲಿಯಂ ಸಂಪನ್ಮೂಲಗಳ ಕಮಿಷನರ್ ಗುಡ್‌ಲಕ್ ಓಪಿಯಾ ತಿಳಿಸಿದ್ದಾರೆ.
ಇದನ್ನೂ ಓದಿ: ಇಂದು ಜಮ್ಮು ಕಾಶ್ಮೀರಕ್ಕೆ ಮೋದಿ : 20 ಸಾವಿರ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ
ತೈಲ ಕಂಪನಿಗಳ ಒಡೆತನದ ಪೈಪ್‌ಲೈನ್‌ಗಳಿಂದ ಕಚ್ಚಾ ತೈಲವನ್ನು ಟ್ಯಾಪ್ ಮಾಡುವ ಮೂಲಕ ಮತ್ತು ಸುಧಾರಿತ ಟ್ಯಾಂಕ್‌ಗಳಲ್ಲಿ ಉತ್ಪನ್ನಗಳಾಗಿ ಬಟ್ಟಿ ಇಳಿಸುವ ಮೂಲಕ ಇಂತಹ ಅಕ್ರಮ ತೈಲ ಸಂಸ್ಕರಣಾಗಾರಗಳು ಕಾರ್ಯನಿರ್ವಹಿಸುತ್ತವೆ. ತೈಲ ಪೈಪ್‌ಲೈನ್ ವಿಧ್ವಂಸಕತೆ ಮತ್ತು ತೈಲ ಕಳ್ಳತನಗಳು ನೈಜೀರಿಯಾದಲ್ಲಿ ಆಗಾಗ್ಗೆ ವರದಿಯಾಗುತ್ತವೆ. ಇದು ದೇಶದ ಭಾರಿ ಆರ್ಥಿಕ ನಷ್ಟವನ್ನು ಉಂಟು ಮಾಡುತ್ತದೆ.