ವಾಷಿಂಗ್ಟನ್ (ಅಮೆರಿಕ): ಪಾಕಿಸ್ತಾನವು ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಗುರುವಾರ ಡೆಮಾಕ್ರಟಿಕ್ ಕಾಂಗ್ರೆಷನಲ್ ಪ್ರಚಾರ ಸಮಿತಿಯ ಉದ್ದೇಶಿಸಿ ಅವರು ಮಾತನಾಡುತ್ತ ಈ ಹೇಳಿಕೆ ನೀಡಿದ್ದಾರೆ.
ಶ್ವೇತಭವನದ ವೆಬ್‌ಸೈಟ್‌ನಲ್ಲಿ ಜೋ ಬೈಡನ್ ಹೇಳಿಕೆ ಪ್ರಕಟಿಸಲಾಗಿದೆ. ನನ್ನ ಯೋಚನೆ ಪ್ರಕಾರ ಬಹುಶಃ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಪಾಕಿಸ್ತಾನ ಒಂದಾಗಿದೆ. ಇತರ ಯಾವುದೇ ದೇಶಗಳೊಂದಿಗೆ ಹೊಂದಾಣಿಕೆ ಇಲ್ಲದೇ ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದೆ ಎಂದು ಜೋ ಬೈಡನ್ ಹೇಳಿದ್ದಾರೆ.
ಜಾಗತಿಕವಾಗಿ ಬದಲಾಗುತ್ತಿರುವ ರಾಜಕೀಯ ಪರಿಸ್ಥಿತಿಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷರಿಂದ ಪಾಕಿಸ್ತಾನದ ವಿರುದ್ಧ ಟೀಕೆ ಕೇಳಿ ಬಂದಿದೆ. ಜೊತೆಗೆ ಚೀನಾ ಮತ್ತು ರಷ್ಯಾಕ್ಕೆ ಸಂಬಂಧಿಸಿದಂತೆ ಅಮೆರಿಕದ ವಿದೇಶಾಂಗ ನೀತಿಯ ಬಗ್ಗೆ ಮಾತನಾಡುತ್ತ ಈ ಹೇಳಿಕೆ ನೀಡಿದ್ದಾರೆ. ಇದರಿಂದ ಅಮೆರಿಕದ ಜೊತೆಗಿನ ಸಂಬಂಧಗಳನ್ನು ಸುಧಾರಿಸಿಕೊಳ್ಳಬೇಕೆಂಬ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆಯಾಗಿದೆ.
ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆ ಛಾವಣಿ ಮೇಲೆ 200ಕ್ಕೂ ಹೆಚ್ಚು ಕೊಳೆತ ಶವಗಳು ಪತ್ತೆ.. ಕೆಲ ದೇಹಗಳ ಅಂಗಾಂಗಗಳು ನಾಪತ್ತೆ