ಕರಾಚಿ(ಪಾಕಿಸ್ತಾನ): ವ್ಯಕ್ತಿಯೊಬ್ಬ ತನ್ನ ಆರು ಮಕ್ಕಳ ಮುಂದೆಯೇ ಪತ್ನಿಯನ್ನು ಕೊಂದು ದೊಡ್ಡದೊಂದು ಪಾತ್ರೆಯಲ್ಲಿ ಕುದಿಸಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ. ನಗರದ ಗುಲ್ಶನ್-ಎ-ಇಕ್ಬಾಲ್ ಪ್ರದೇಶದ ಖಾಸಗಿ ಶಾಲೆಯ ಅಡುಗೆಮನೆಯಲ್ಲಿ ಪ್ರಕರಣ ನಡೆದಿದೆ. ಅಲ್ಲಿನ ದೊಡ್ಡ ಪಾತ್ರೆಯಲ್ಲಿ ಮಹಿಳೆಯ ಶವವನ್ನು ಪೊಲೀಸರು ನೋಡಿ ಅರೆಕ್ಷಣ ದಂಗಾಗಿ ಹೋಗಿದ್ದರು. ಈ ಕುರಿತು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.
ಪೊಲೀಸರ ಪ್ರಕಾರ, ದಾರುಣವಾಗಿ ಮೃತಪಟ್ಟ ಮಹಿಳೆಯ 15 ವರ್ಷದ ಮಗಳು ಪೊಲೀಸರಿಗೆ ಕರೆ ಮಾಡಿ ಮಾಹಿತಿ ಮುಟ್ಟಿಸಿದ್ದಾಳೆ. ಸುದ್ದಿ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದರು. ಬಳಿಕ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಜಿನ್ನಾ ಸ್ನಾತಕೋತ್ತರ ವೈದ್ಯಕೀಯ ಕೇಂದ್ರಕ್ಕೆ ರವಾನಿಸಿದ್ದಾರೆ.
ಇದನ್ನೂ ಓದಿ: ರೌಡಿಶೀಟರ್ ಕೊಲೆ ಹಳೇ ವೈಷಮ್ಯದಿಂದಲೇ ನಡೆದಿದೆ ಎಂದ ಶಿವಮೊಗ್ಗ ಎಸ್ಪಿ.. ಭಯ ಮೂಡಿಸುತ್ತಿದೆ ಸಿಸಿಟಿವಿ ದೃಶ್ಯ!
ದುರುಳ ಪತಿ ತನ್ನ ಪತ್ನಿಯನ್ನು ಅಕ್ರಮ ಸಂಬಂಧದಲ್ಲಿ ತೊಡಗಿಸಿಕೊಳ್ಳುವಂತೆ ಬಲವಂತಪಡಿಸಿದ್ದನಂತೆ. ಅದಕ್ಕೆ ಆಕೆ ನಿರಾಕರಿಸಿದಾಗ ಕುಪಿತಗೊಂಡು ಭೀಕರವಾಗಿ ಕೊಂದಿದ್ದಾನೆ ಎಂದು ತಿಳಿದುಬಂದಿದೆ.