ಇಸ್ಲಾಮಾಬಾದ್: ಪಾಕಿಸ್ತಾನ ಸೇನಾ ಪಡೆಗಳು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಒಂಬತ್ತು ಉಗ್ರರನ್ನು ಹೊಡೆದುರುಳಿಸಿವೆ. ಗಾಯಗೊಂಡ ಮೂವರನ್ನು ಬಂಧಿಸಲಾಗಿದೆ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ.
ಭದ್ರತಾ ಪಡೆಗಳು ಇಸ್ಲಾಮಾಬಾದ್ನ ಕೊಹ್ಲು ಜಿಲ್ಲೆಯಲ್ಲಿ ಶನಿವಾರ ಶೋಧ ಕಾರ್ಯಾಚರಣೆ ನಡೆಸಿದೆ. ಭಯೋತ್ಪಾದಕರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಲು ಯೋಜಿಸಿದ್ದರು ಎಂದು ತಿಳಿದುಬಂದಿದೆ. ಉಗ್ರರು ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿಗೆ ಸೇರಿದವರಾಗಿದ್ದಾರೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಚೀನಾದಲ್ಲಿ ಮತ್ತೆ ಲಾಕ್ಡೌನ್: ಸರ್ಕಾರದ ವಿರುದ್ಧ ಬೀದಿಗಿಳಿದ ಜನತೆ