ETV Bharat / international

ಕ್ವಾಡ್‌ ಶೃಂಗಸಭೆ: ಟೋಕಿಯೋದಲ್ಲಿ ಪ್ರಧಾನಿ ಮೋದಿಗೆ ಆತ್ಮೀಯ ಸ್ವಾಗತ - Quad summit in Tokyo

ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ನರೇಂದ್ರ ಮೋದಿ ಜಪಾನ್​ಗೆ 2 ದಿನಗಳ ಭೇಟಿ ನೀಡಿದ್ದಾರೆ. ಮೇ 24ರಂದು ಟೋಕಿಯೋದಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಿ, ಇಂಡೋ-ಪೆಸಿಫಿಕ್, ಜಾಗತಿಕ ಸಮಸ್ಯೆಗಳ ಕುರಿತು ಮಾತುಕತೆ ನಡೆಸಲಿದ್ದಾರೆ.

ಮೋದಿ
ಮೋದಿ
author img

By

Published : May 23, 2022, 7:43 AM IST

ಟೋಕಿಯೋ (ಜಪಾನ್): ಇಂಡೋ-ಪೆಸಿಫಿಕ್, ಜಾಗತಿಕ ಸಮಸ್ಯೆಗಳು ಹಾಗೂ ಪ್ರಭಾವಿ ರಾಷ್ಟ್ರಗಳ ನಡುವಿನ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಹಿನ್ನೆಲೆಯಲ್ಲಿ ಟೋಕಿಯೋ ನಗರದಲ್ಲಿ ನಡೆಯಲಿರುವ ಕ್ವಾಡ್‌ ರಾಷ್ಟ್ರಗಳ ನಾಯಕರ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಲ್ಗೊಳ್ಳಲು ಇಂದು ಜಪಾನ್‌ನ ಟೋಕಿಯೋಗೆ ಆಗಮಿಸಿದರು. ಪ್ರಧಾನಿ ನರೇಂದ್ರ ಮೋದಿಯನ್ನು ಜಪಾನ್​ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಆತ್ಮೀಯವಾಗಿ ಸ್ವಾಗತಿಸಿದರು.

ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಮೋದಿ ಟೋಕಿಯೋಗೆ 2 ದಿನಗಳ ಕಾಲ ಭೇಟಿ ನೀಡಿದ್ದಾರೆ. ಕಳೆದ 8 ವರ್ಷಗಳಲ್ಲಿ ಜಪಾನ್‌ಗೆ ಐದನೇ ಭೇಟಿ ಇದಾಗಿದ್ದು, ಮೋದಿ ಅವರನ್ನು ಟೋಕಿಯೋದಲ್ಲಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.

ಮೇ 24 ರಂದು ಟೋಕಿಯೋದಲ್ಲಿ ನಡೆಯಲಿರುವ ಕ್ವಾಡ್ ಶೃಂಗದಲ್ಲಿ ಮೋದಿ ಮಾತ್ರವಲ್ಲದೇ, ಜಪಾನ್‌ ಪ್ರಧಾನಿ ಫ್ಯೂಮಿಯೊ ಕಿಷಿದಾ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಹಾಗೂ ಆಸ್ಟ್ರೇಲಿಯಾದ ನಿಯೋಜಿತ ಆಂಥೋನಿ ಅಲ್ಬನೀಸ್ ಭಾಗವಹಿಸಲಿದ್ದಾರೆ. ಕ್ವಾಡ್ ಭದ್ರತಾ ಸಂವಾದವು ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾವನ್ನು ಒಳಗೊಂಡಿದೆ.

ಇನ್ನು ಜಪಾನ್​ಗೆ ತೆರಳುವ ಮುನ್ನಾ ಮೋದಿ ತಮ್ಮ ಹೇಳಿಕೆಯಲ್ಲಿ, 'ಜಪಾನ್‌ನಲ್ಲಿನ ಎರಡನೇ ವ್ಯಕ್ತಿಗತ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದೇನೆ, ನಾಲ್ಕು ದೇಶಗಳ ನಾಯಕರಿಗೆ ಉಪಕ್ರಮಗಳ ಪ್ರಗತಿಯನ್ನು ಪರಿಶೀಲಿಸಲು ಮತ್ತು ಇಂಡೋ-ಪೆಸಿಫಿಕ್‌ನಲ್ಲಿನ ಬೆಳವಣಿಗೆಗಳು ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಕ್ವಾಡ್‌ ಅವಕಾಶವನ್ನು ಒದಗಿಸುತ್ತದೆ. ನಾವು ಪ್ರಾದೇಶಿಕ ಬೆಳವಣಿಗೆಗಳು ಮತ್ತು ಸಮಕಾಲೀನ ಜಾಗತಿಕ ಸಮಸ್ಯೆಗಳ ಕುರಿತು ನಮ್ಮ ಮಾತುಕತೆಗಳನ್ನು ಮುಂದುವರಿಸುತ್ತೇವೆ' ಎಂದು ಹೇಳಿದ್ದರು.

  • Prime Minister Narendra Modi arrives in Tokyo, Japan to participate in the Quad Leaders’ Summit as part of his 2-day tour starting today, May 23, at the invitation of Japanese Prime Minister Fumio Kishida. pic.twitter.com/MWD5WfR4x8

    — ANI (@ANI) May 22, 2022 " class="align-text-top noRightClick twitterSection" data=" ">

ಆಸ್ಟ್ರೇಲಿಯಾದ ನೂತನ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಮೊದಲ ಬಾರಿಗೆ ಕ್ವಾಡ್ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಅವರೊಂದಿಗೂ ದ್ವಿಪಕ್ಷೀಯ ಮಾತುಕತೆ ನಡೆಸಲಾಗುವುದು. ಉಭಯ ದೇಶಗಳ ನಡುವಿನ ಬಹುಮುಖಿ ಸಹಕಾರ ಮತ್ತು ಪರಸ್ಪರ ಹಿತಾಸಕ್ತಿ ಹಾಗೂ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಇದನ್ನೂ ಓದಿ: ಛತ್ತೀಗಢದಲ್ಲಿ ನಿರ್ಭಯಾ ಗ್ಯಾಂಗ್​ರೇಪ್​.. ಹಲ್ಲೆ ನಡೆಸಿ ಬಾಲಕಿ ಮೇಲೆ ಅತ್ಯಾಚಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.