ETV Bharat / international

ಬುದ್ಧ ಪೂರ್ಣಿಮೆಯಂದು ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ - ಮೋದಿ ನೇಪಾಳ ಭೇಟಿ

ಪ್ರಧಾನಿ ನರೇಂದ್ರ ಮೋದಿ ನೇಪಾಳ ಭೇಟಿ ಹಲವು ಮಹತ್ವದ್ದಾಗಿದೆ. ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ಭಗವಾನ್ ಬುದ್ಧನ ಜನ್ಮ ಸ್ಥಳವಾದ ಲುಂಬಿನಿಗೆ ಮೋದಿ ಇಂದು ಭೇಟಿ ನೀಡಿದ್ದು, ಶಾಂತಿಯ ಸಂದೇಶ ನೀಡಲಿದ್ದಾರೆ.

ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ
ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ
author img

By

Published : May 16, 2022, 12:43 PM IST

Updated : May 16, 2022, 12:57 PM IST

ಲುಂಬಿನಿ (ನೇಪಾಳ): ಮೋದಿ ನೇಪಾಳ ಭೇಟಿ ಮಹತ್ವದಾಗಿದ್ದು, ಗೌತಮ ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ಬುದ್ಧ ಪೂರ್ಣಿಮೆಯಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಜೊತೆಗೆ ಜಲವಿದ್ಯುತ್, ಅಭಿವೃದ್ಧಿ, ಸಂಪರ್ಕ ಸೇರಿದಂತೆ ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರವನ್ನು ವಿಸ್ತರಿಸಲು ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರೊಂದಿಗೆ ಸಮಗ್ರ ಮಾತುಕತೆ ನಡೆಸಲಿದ್ದಾರೆ.

ದೇವುಬಾ ಅವರ ಆಹ್ವಾನದ ಮೇರೆಗೆ ತೆರಳಿದ್ದು, 2014 ರಿಂದ ಇದು ಮೋದಿ ಅವರ 5ನೇ ನೇಪಾಳ ಭೇಟಿಯಾಗಿದೆ. ಪ್ರಧಾನಿ ಮೋದಿ ಮತ್ತು ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಮತ್ತು ಅವರ ಪತ್ನಿ ಡಾ. ಅರ್ಜು ರಾಣಾ ದೇವುಬಾ ಅವರು ಮಾಯಾದೇವಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಲುಂಬಿನಿ ಮೊನಾಸ್ಟಿಕ್ ವಲಯದಲ್ಲಿ ದೆಹಲಿಯ ಇಂಟರ್​ ನ್ಯಾಷನಲ್ ಬೌದ್ಧ ಒಕ್ಕೂಟದ (ಐಬಿಸಿ) ಪ್ಲಾಟ್‌ನಲ್ಲಿ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯ ನೆರವೇರಿಸಿದರು.

ಬುದ್ಧನ ಜನ್ಮ ಸ್ಥಳ ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ

ನಂತರ, ಪ್ರಧಾನಿ ಮೋದಿ ಮತ್ತು ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರು ದೇವಾಲಯದ ಪಕ್ಕದಲ್ಲಿರುವ ಅಶೋಕ ಸ್ತಂಭದ ಬಳಿ ದೀಪ ಬೆಳಗಿಸಿದರು. ಕ್ರಿಸ್ತಪೂರ್ವ 249 ರಲ್ಲಿ ಚಕ್ರವರ್ತಿ ಅಶೋಕನಿಂದ ಸ್ಥಾಪಿಸಲ್ಪಟ್ಟ ಈ ಸ್ತಂಭವು ಹೆಚ್ಚು ಪ್ರಖ್ಯಾತಿ ಪಡೆದಿದೆ. ನೇಪಾಳ ಸರ್ಕಾರ ಮತ್ತು ಲುಂಬಿನಿ ಅಭಿವೃದ್ಧಿ ಟ್ರಸ್ಟ್‌ ಏರ್ಪಡಿಸಿರುವ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಮೋದಿ ಭಾಷಣ ಮಾಡಲಿದ್ದಾರೆ.

  • Lumbini, Nepal | PM Modi & Nepal PM Sher Bahadur Deuba participate in the foundation stone laying ceremony for construction of a centre for Buddhist culture & heritage, in a plot belonging to the International Buddhist Confederation (IBC), Delhi within the Lumbini Monastic Zone pic.twitter.com/8FX7IF8MVi

    — ANI (@ANI) May 16, 2022 " class="align-text-top noRightClick twitterSection" data=" ">

'ಭಾರತದ ಪ್ರಧಾನಿ ಮೋದಿ ಮತ್ತು ನೇಪಾಳದ ಪ್ರಧಾನಿ ದೇವುಬಾ ಲುಂಬಿನಿಯಲ್ಲಿ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಈ ವೇಳೆ ನೇಪಾಳ-ಭಾರತದ ಸಹಕಾರ ಮತ್ತು ಪರಸ್ಪರ ಹಿತಾಸಕ್ತಿಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ' ಎಂದು ನೇಪಾಳದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ಗೆ 'ರಕ್ತದ ಕ್ಯಾನ್ಸರ್‌, ಆರೋಗ್ಯ ಗಂಭೀರ': ವರದಿ

Last Updated : May 16, 2022, 12:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.