ನ್ಯೂಯಾರ್ಕ್, ಅಮೆರಿಕ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಯೋಗ ದಿನಾಚರಣೆ ಮುನ್ನ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಲಾನ್‌ನಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಪ್ರಧಾನಿ ಮೋದಿ ಅವರು ಯುನೈಟೆಡ್ ಸ್ಟೇಟ್ಸ್‌ಗೆ ತಮ್ಮ ಅಧಿಕೃತ ಭೇಟಿಯ ಸಂದರ್ಭದಲ್ಲಿ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನದ 9 ನೇ ಆವೃತ್ತಿಯನ್ನು ಮುನ್ನಡೆಸಲಿದ್ದಾರೆ. ಅಧ್ಯಕ್ಷ ಜೋ ಬಿಡೆನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಜೂನ್ 20-24 ರವರೆಗೆ ಯುನೈಟೆಡ್ ಸ್ಟೇಟ್ಸ್‌ಗೆ ಭೇಟಿ ನೀಡುತ್ತಿದ್ದಾರೆ. ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ.
2015 ಜೂನ್ 21 ರಂದು ವಿಶ್ವಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಯೋಗವು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಇದು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡಿತು. 2014 ರ ವಿಶ್ವಸಂಸ್ಥೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 21 ರ ದಿನಾಂಕವನ್ನು ಸೂಚಿಸಿದರು. ಏಕೆಂದರೆ ಇದು ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದೆ ಮತ್ತು ಪ್ರಪಂಚದ ಅನೇಕ ಭಾಗಗಳಲ್ಲಿ ವಿಶೇಷ ಪ್ರಾಮುಖ್ಯತೆ ಹೊಂದಿದೆ.
ನ್ಯೂಯಾರ್ಕ್‌ನಲ್ಲಿ ಯೋಗ ದಿನಾಚರಣೆಯ ನಂತರ ಪ್ರಧಾನಿ ಮೋದಿ ವಾಷಿಂಗ್ಟನ್ ಡಿಸಿಗೆ ಪ್ರಯಾಣಿಸಲಿದ್ದಾರೆ. ಜೂನ್ 22 ರಂದು ಶ್ವೇತಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಔಪಚಾರಿಕವಾಗಿ ಸ್ವಾಗತಿಸಲಾಗುವುದು ಮತ್ತು ಉನ್ನತ ಮಟ್ಟದ ಸಂವಾದವನ್ನು ಮುಂದುವರಿಸಲು ಅಧ್ಯಕ್ಷ ಬೈಡನ್ ಅವರನ್ನು ಭೇಟಿ ಮಾಡಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೊರಡಿಸಿದ ಪ್ರಕಟಣೆಯ ಪ್ರಕಾರ, ಅಧ್ಯಕ್ಷ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡನ್ ಅವರು ಅದೇ ಸಂಜೆ ಪ್ರಧಾನ ಮಂತ್ರಿಯ ಗೌರವಾರ್ಥವಾಗಿ ಭೋಜಕೂಟ ಆಯೋಜಿಸಲಿದ್ದಾರೆ.
ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸ್ಪೀಕರ್ ಕೆವಿನ್ ಮೆಕಾರ್ಥಿ ಮತ್ತು ಸೆನೆಟ್ ಅಧ್ಯಕ್ಷ ಚಾರ್ಲ್ಸ್ ಶುಮರ್ ಸೇರಿದಂತೆ ಅಮೆರಿಕ ಕಾಂಗ್ರೆಸ್ ನಾಯಕರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜೂನ್ 22 ರಂದು ಯುಎಸ್ ಕಾಂಗ್ರೆಸ್‌ನ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜೂನ್ 23 ರಂದು, ಪ್ರಧಾನ ಮಂತ್ರಿಗೆ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬಿಲ್ಕೆನ್ ಜಂಟಿಯಾಗಿ ಭೋಜನವನ್ನು ಏರ್ಪಡಿಸಲಿದ್ದಾರೆ. ಬಳಿಕ ಪ್ರಧಾನ ಮಂತ್ರಿಗಳು ಪ್ರಮುಖ ಸಿಇಒಗಳು, ವೃತ್ತಿಪರರು ಮತ್ತು ಇತರರೊಂದಿಗೆ ಹಲವಾರು ಸಂವಾದಗಳನ್ನು ನಡೆಸಲು ನಿರ್ಧರಿಸಿದ್ದಾರೆ. ಈ ವೇಳೆ, ಪ್ರಧಾನಿ ಅವರು ಸಾಗರೋತ್ತರ ಭಾರತೀಯರ ಸದಸ್ಯರನ್ನೂ ಭೇಟಿಯಾಗಲಿದ್ದಾರೆ.
ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಅಧಿಕೃತ ರಾಜ್ಯ ಭೇಟಿಯ ಸಮಯದ ಕಾರ್ಯಕ್ರಮಗಳಲ್ಲಿ ಪ್ರಸಿದ್ಧ ಹಾಲಿವುಡ್ ನಟಿ ಮತ್ತು ಗಾಯಕಿ ಮೇರಿ ಮಿಲ್ಬೆನ್ ನ್ಯೂಯಾರ್ಕ್ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ಪ್ರದರ್ಶನ ನೀಡಲಿದ್ದಾರೆ. ಶನಿವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಲಾಗಿದೆ. ಆಫ್ರಿಕನ್ ಮೂಲದ ಅಮೆರಿಕದ ಪ್ರಜೆ ಮಿಲ್ಬೆನ್ (38) ಭಾರತದಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ...’ ಮತ್ತು ‘ಓಂ ಜೈ ಜಗದೀಶ್ ಹರೇ...’ ಹಾಡುವ ಮೂಲಕ ಹೆಚ್ಚು ಜನಪ್ರಿಯರಾಗಿದ್ದಾರೆ.
ಓದಿ: Yoga: ಮೊದಲ ಬಾರಿ ವಿಶ್ವಸಂಸ್ಥೆಯಲ್ಲಿ ಪ್ರಧಾನಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ!