ಕೊಲಂಬೊ(ಶ್ರೀಲಂಕಾ): ಆರ್ಥಿಕ ಬಿಕ್ಕಟ್ಟಿನಿಂದ ಸಂಕಷ್ಟಕ್ಕೊಳಗಾಗಿರುವ ಶ್ರೀಲಂಕಾದಲ್ಲಿ ಪ್ರತಿಭಟನಾ ನಿರತರು ದೊಡ್ಡ ಮಟ್ಟದ ಹೋರಾಟ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಶ್ರೀಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರ ಜೊತೆಗೆ ಸಚಿವ ಬಂಡುಲ ಗುಣವರ್ಧನ್ ಕೂಡ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.
-
To ensure the continuation of the Government including the safety of all citizens I accept the best recommendation of the Party Leaders today, to make way for an All-Party Government.
— Ranil Wickremesinghe (@RW_UNP) July 9, 2022 " class="align-text-top noRightClick twitterSection" data="
To facilitate this I will resign as Prime Minister.
">To ensure the continuation of the Government including the safety of all citizens I accept the best recommendation of the Party Leaders today, to make way for an All-Party Government.
— Ranil Wickremesinghe (@RW_UNP) July 9, 2022
To facilitate this I will resign as Prime Minister.To ensure the continuation of the Government including the safety of all citizens I accept the best recommendation of the Party Leaders today, to make way for an All-Party Government.
— Ranil Wickremesinghe (@RW_UNP) July 9, 2022
To facilitate this I will resign as Prime Minister.
ತಮ್ಮ ರಾಜೀನಾಮೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ವಿಕ್ರಮಸಿಂಘೆ, ಲಂಕಾ ಜನರ ಸುರಕ್ಷತೆ ಮೊದಲ ಆದ್ಯತೆಯಾಗಿದೆ. ಪಕ್ಷದ ನಾಯಕರ ಶಿಫಾರಸು ಸ್ವೀಕರಿಸಿ ಮತ್ತು ಎಲ್ಲ ಪಕ್ಷಗಳು ಸೇರಿ ಸರ್ಕಾರಿ ರಚನೆ ಮಾಡಲು ಅನುವು ಮಾಡಿಕೊಡಲು ನಾನು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಎಲ್ಲ ನಾಗರಿಕರ ಸುರಕ್ಷತೆ ಮತ್ತು ಸರ್ಕಾರದ ಮುಂದುವರಿಯುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಜನರ ರಕ್ಷಣೆ ಮುಖ್ಯ ಕರ್ತವ್ಯವಾಗಿದೆ ಎಂದರು. ರಾಜೀನಾಮೆ ನೀಡುವುದಕ್ಕೂ ಮುಂಚಿತವಾಗಿ ಸಂಸದರೊಂದಿಗೆ ಸಭೆ ನಡೆಸಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿರಿ: ಶ್ರೀಲಂಕಾದಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ.. ಗೋತಬಯ ರಾಜಪಕ್ಸ ಪರಾರಿ
ಶ್ರೀಲಂಕಾ ಅಧ್ಯಕ್ಷರ ನಿವಾಸಕ್ಕೆ ಸಾವಿರಾರು ಪ್ರತಿಭಟನಾಕಾರರು ಮುತ್ತಿಗೆ ಹಾಕುತ್ತಿದ್ದಂತೆ ಸರ್ಕಾರದ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ದೇಶದಲ್ಲಿ ಪರಿಸ್ಥಿತಿ ಕೈಮೀರಿ ಹೋಗುತ್ತಿರುವುದನ್ನು ಅರಿತ ಪ್ರಧಾನ ಮಂತ್ರಿ ರನಿಲ್ ವಿಕ್ರಮಸಿಂಘೆ ಎಲ್ಲ ಪಕ್ಷಗಳ ಮುಖಂಡರ ತುರ್ತು ಸಭೆ ಕರೆದಿದ್ದರು. ಇದರ ಬೆನ್ನಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.
-
#WATCH | Sri Lanka: Amid massive unrest in the country, protestors set ablaze the private residence of Sri Lankan PM Ranil Wickremesinghe#SriLankaCrisis pic.twitter.com/BDkyScWpui
— ANI (@ANI) July 9, 2022 " class="align-text-top noRightClick twitterSection" data="
">#WATCH | Sri Lanka: Amid massive unrest in the country, protestors set ablaze the private residence of Sri Lankan PM Ranil Wickremesinghe#SriLankaCrisis pic.twitter.com/BDkyScWpui
— ANI (@ANI) July 9, 2022#WATCH | Sri Lanka: Amid massive unrest in the country, protestors set ablaze the private residence of Sri Lankan PM Ranil Wickremesinghe#SriLankaCrisis pic.twitter.com/BDkyScWpui
— ANI (@ANI) July 9, 2022
ಪ್ರಧಾನಿ ಖಾಸಗಿ ನಿವಾಸಕ್ಕೆ ಬೆಂಕಿ: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಪ್ರತಿಭಟನಾಕಾರರು ರಸ್ತೆಗಿಳಿದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ರಾನಿಲ್ ವಿಕ್ರಮ ಸಿಂಘೆ ಅವರ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ.