ETV Bharat / international

ಭಾರತದಲ್ಲಿ ಭಯೋತ್ಪಾದಕ ದಾಳಿಗೆ ಸಂಚು: ಐಸಿಸ್​ ಆತ್ಮಾಹುತಿ ಬಾಂಬರ್​​ನನ್ನು ಬಂಧಿಸಿದ ರಷ್ಯಾ

author img

By

Published : Aug 22, 2022, 3:06 PM IST

Updated : Aug 22, 2022, 3:25 PM IST

ರಷ್ಯಾದ ಎಫ್‌ಎಸ್‌ಬಿ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಯ ಸದಸ್ಯನನ್ನು ಗುರುತಿಸಿ ಬಂಧಿಸಿದೆ. ಈತ ಭಾರತದಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಎಂದು ತಿಳಿದುಬಂದಿದೆ.

ಭಾರತದಲ್ಲಿ ಭಯೋತ್ಪಾದಕ ದಾಳಿಗೆ ಸಂಚು
ಭಾರತದಲ್ಲಿ ಭಯೋತ್ಪಾದಕ ದಾಳಿಗೆ ಸಂಚು

ಮಾಸ್ಕೋ: ಭಾರತದಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಇಸ್ಲಾಮಿಕ್ ಸ್ಟೇಟ್(ಐಸಿಸ್​) ಭಯೋತ್ಪಾದಕ ಗುಂಪಿನ ಸದಸ್ಯನೋರ್ವನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವಿಸ್ (ಎಫ್‌ಎಸ್‌ಬಿ) ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ.

ನಿಷೇಧಿತ ಇಸ್ಲಾಮಿಕ್ ಸ್ಟೇಟ್ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯ ಸದಸ್ಯರನ್ನು ಎಫ್‌ಎಸ್‌ಬಿ ಗುರುತಿಸಿ ಬಂಧಿಸಿದ್ದು, ಈತ ಮಧ್ಯ ಏಷ್ಯಾ ಪ್ರದೇಶದ ದೇಶವೊಂದರ ಸ್ಥಳೀಯ ಎನ್ನಲಾಗ್ತಿದೆ. ಈ ಶಂಕಿತ ಭಾರತದ ಆಡಳಿತ ವಲಯದ ಪ್ರತಿನಿಧಿಯನ್ನು ಹತ್ಯೆ ಮಾಡುವ ಉದ್ದೇಶದಿಂದ ತನ್ನನ್ನು ತಾನು ಸ್ಫೋಟಿಸಿಕೊಳ್ಳುವ ಭಯೋತ್ಪಾದಕ ಕೃತ್ಯವನ್ನು ಎಸಗಲು ಯೋಜಿಸಿದ್ದ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಭಾರತದಲ್ಲಿ ಭಯೋತ್ಪಾದಕ ದಾಳಿಗೆ ಸಂಚು
ಭಾರತದಲ್ಲಿ ಭಯೋತ್ಪಾದಕ ದಾಳಿಗೆ ಸಂಚು

ಈ ಬಂಧಿತನನ್ನು ಐಎಸ್ ನಾಯಕರೊಬ್ಬರು ಟರ್ಕಿಯಲ್ಲಿ ಆತ್ಮಹತ್ಯಾ ಬಾಂಬರ್ ಆಗಿ ನೇಮಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಈ ಘಟನೆ ಇನ್ನೂ ಹಲವಾರು ಆಯಾಮಗಳನ್ನು ಹೊಂದಿದೆ ಎನ್ನಲಾಗ್ತಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.

ಗೃಹ ಸಚಿವಾಲಯದ ಪ್ರಕಾರ, ಐಎಸಿಸ್​ ತನ್ನ ಸಿದ್ಧಾಂತವನ್ನು ಪ್ರಚಾರ ಮಾಡಲು ವಿವಿಧ ಇಂಟರ್ನೆಟ್ ಆಧಾರಿತ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಕೆ ಮಾಡುತ್ತಿದೆಯಂತೆ. ಈ ನಿಟ್ಟಿನಲ್ಲಿ ಸೈಬರ್‌ಸ್ಪೇಸ್ ಅನ್ನು ಸಂಬಂಧಪಟ್ಟ ಏಜೆನ್ಸಿಗಳು ಸೂಕ್ಷ್ಮವಾಗಿ ಗಮನಿಸುತ್ತಿವೆ ಮತ್ತು ಕಾನೂನಿನ ಪ್ರಕಾರ ಕ್ರಮ ಕ್ರಮ ತೆಗೆದುಕೊಳ್ಳುತ್ತಿವೆ.

ಇದನ್ನೂ ಓದಿ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಬಂಧನ ಸಾಧ್ಯತೆ: ಭಾರಿ ಪ್ರತಿಭಟನೆಗೆ ಮುಂದಾದ ಪಿಟಿಐ

Last Updated : Aug 22, 2022, 3:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.