ಹೂಸ್ಟನ್ (ಅಮೆರಿಕ): ಅಮೆರಿಕದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದೆ. ಆಗಂತುಕನೊಬ್ಬ ಕಟ್ಟಡಕ್ಕೆ ಬೆಂಕಿ ಹಚ್ಚಿ ಬಳಿಕ ಗುಂಡಿನ ದಾಳಿ ನಡೆಸಿದ ಘಟನೆಯಲ್ಲಿ ನಾಲ್ವರು ಮೃತಪಟ್ಟು, ಇಬ್ಬರು ಗಾಯಗೊಂಡಿರುವುದು ಅಮೆರಿಕದ ಹೂಸ್ಟನ್ನಲ್ಲಿ ಭಾನುವಾರ ನಡೆದಿದೆ. ರಕ್ಷಣೆಗೆ ಧಾವಿಸಿದ ಪೊಲೀಸರು ದಾಳಿಕೋರನನ್ನು ಗುಂಡಿಟ್ಟು ಕೊಂದಿದ್ದಾರೆ.
ಯಾವುದೋ ಕಾರಣಕ್ಕಾಗಿ ವ್ಯಕ್ತಿಯೊಬ್ಬ ಕಟ್ಟಡವೊಂದಕ್ಕೆ ಬೆಂಕಿ ಹಚ್ಚಿದ್ದಾನೆ. ಈ ವೇಳೆ, ಅದರಲ್ಲಿದ್ದ ಜನರು ಹೊರಗಡೆ ಓಡಿ ಬರುವಾಗ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಇದರಿಂದ ಸ್ಥಳದಲ್ಲೇ ನಾಲ್ವರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.
ವಿಷಯ ತಿಳಿದು ರಕ್ಷಣೆಗೆ ಬಂದ ಪೊಲೀಸರ ಮೇಲೂ ದುಷ್ಕರ್ಮಿ ಗುಂಡಿನ ದಾಳಿ ಮಾಡಿದ್ದಾನೆ. ಇದರಿಂದ ಪೊಲೀಸರು ತಕ್ಷಣವೇ ಸಂತ್ರಸ್ತರ ನೆರವಿಗೆ ಧಾವಿಸಲು ಸಾಧ್ಯವಾಗಿಲ್ಲ. ಪೊಲೀಸ್ ಮಧ್ಯೆ ಆಗಂತುಕನ ಮಧ್ಯೆ ಕೆಲಹೊತ್ತು ಗುಂಡಿನ ಚಕಮಕಿ ನಡೆದಿದೆ. ಬಳಿಕ ಪೊಲೀಸರು ದಾಳಿಕೋರನನ್ನು ಗುಂಡಿಕ್ಕಿದ್ದಾರೆ.
ಮೃತರೆಲ್ಲರೂ ಪುರುಷರಾಗಿದ್ದು 40 ರಿಂದ 60 ವರ್ಷ ವಯಸ್ಸಿನವರು ಎಂದು ಅಂದಾಜಿಸಲಾಗಿದೆ. ಕಳೆದ ವಾರ ಕೂಡ ಅಮೆರಿಕದ ಮೇರಿಲ್ಯಾಂಡ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದರು.
ಓದಿ: ಚಾಲಕನ ಅಜಾಗರೂಕತೆಯಿಂದ ಟೋಲ್ಗೆ ಅಪ್ಪಳಿಸಿದ ಬಸ್, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ