ವ್ಯಾಂಕೋವರ್ (ಬ್ರಿಟಿಷ್ ಕೊಲಂಬಿಯಾ): ಬ್ರಿಟಿಷ್ ಕೊಲಂಬಿಯಾದ ಉಪನಗರದ ವ್ಯಾಂಕೋವರ್ನ ಲ್ಯಾಂಗ್ಲಿಯಲ್ಲಿ ಸೋಮವಾರ ರಾತ್ರಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ನಿರಾಶ್ರಿತರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ. ದುಷ್ಕರ್ಮಿ ಬಂದೂಕುಧಾರಿ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯರಾತ್ರಿ ಗುಂಡಿನ ದಾಳಿ ಪ್ರಾರಂಭವಾಗಿದ್ದು, ಮುಂಜಾನೆಯವರೆಗೂ ಮುಂದುವರಿದಿತ್ತು. ನಿರಾಶ್ರಿತರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ತುರ್ತು ಪ್ರತಿಕ್ರಿಯೆ ತಂಡವು, ಆರೋಪಿಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡ ಮಹಿಳೆಯೊಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ.
ಇದನ್ನೂ ಓದಿ: ಜಪಾನ್ ದಕ್ಷಿಣ ದ್ವೀಪದಲ್ಲಿ ಸಕುರಾಜಿಮಾ ಜ್ವಾಲಾಮುಖಿ ಸ್ಫೋಟ