ಕೋಪನ್ಹೇಗನ್: ರಾಜಧಾನಿಯ ಹೊರವಲಯದಲ್ಲಿರುವ ಶಾಪಿಂಗ್ ಮಾಲ್ನಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಗುಂಡಿನ ದಾಳಿ ನಡೆಸಿದ 22 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ. ಇದು ಭಯೋತ್ಪಾದಕ ದಾಳಿಯಾಗಿರಬಹುದು. ಇದರಲ್ಲಿ ಇನ್ನಷ್ಟು ಜನರು ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂದೂಕುಧಾರಿ ವ್ಯಕ್ತಿ ಏಕಾಏಕಿ ಜನರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಜನರು ಮಾಲ್ನಿಂದ ಹೊರ ಓಡುತ್ತಿರುವ ದೃಶ್ಯಗಳು ಭಯಾನಕವಾಗಿದ್ದವು. ಆರೋಪಿ ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಾಲ್ನಲ್ಲಿ ನಡೆದ ಗುಂಡಿನ ದಾಳಿ ಭೀಕರವಾಗಿದೆ. ಇದರಲ್ಲಿ ಸಾವನ್ನಪ್ಪಿದವರ ನಿಖರ ಮಾಹಿತಿ ತಿಳಿದಿಲ್ಲ. ಹಲವರು ಪ್ರಾಣ ತೆತ್ತಿರಬಹುದು. ತನಿಖೆ ನಡೆಸಲಾಗುತ್ತಿದೆ. ಇದೊಂದು ಭಯಾನಕ ಕೃತ್ಯ ಎಂದು ಕೋಪನ್ಹೇಗನ್ ಮೇಯರ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಬಂಧಿತರಾದ ಎಲ್‌ಇಟಿ ಭಯೋತ್ಪಾದಕರಲ್ಲಿ ಓರ್ವ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥನಾಗಿದ್ದ!